ADVERTISEMENT

ಕಾರು– ಬೈಕ್ ಡಿಕ್ಕಿ, ಹಿಂಬದಿ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:59 IST
Last Updated 14 ಡಿಸೆಂಬರ್ 2025, 6:59 IST

ಸಾಸ್ವೆಹಳ್ಳಿ: ಸಮೀಪದ ಹೊಸಹಳ್ಳಿ ಬಳಿ ಶನಿವಾರ ಸಂಜೆ ಕಾರು ಮತ್ತು ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್‌ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿರೇಬಾಸೂರು ಗ್ರಾಮದ ಗಿರೀಶ್ ಕೆ.ಎಚ್ (55) ಮೃತ ವ್ಯಕ್ತಿ.

ಬೈಕ್ ಓಡಿಸುತ್ತಿದ್ದ ಮಣಿಕಂಠ ಅವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಇದರ ಪರಿಣಾಮ ಗಿರೀಶ್ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ADVERTISEMENT

ಮೃತ ಗಿರೀಶ್ ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.