ADVERTISEMENT

ಬಿಜೆಪಿ ಆಮಿಷ ಸುಳ್ಳು: ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2024, 0:13 IST
Last Updated 12 ಮಾರ್ಚ್ 2024, 0:13 IST
ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ‘ನನ್ನನ್ನು ಬಿಜೆಪಿಯತ್ತ ಸೆಳೆಯಲು ಯಾರೂ ಬಂದಿಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗಿದೆ’ ಎಂದು ಕಾಂಗ್ರೆಸ್‌ ಶಾಸಕ ಶಾಮನೂರ ಶಿವಶಂಕರಪ್ಪ ಹೇಳಿದರು.

ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ – ಜೆಡಿಎಸ್ ₹50 ಕೋಟಿ ಆಮಿಷವೊಡ್ಡಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಹೇಳಿಕೆಗೆ ಸೋಮವಾರ ಮೇಲಿನಂತೆ ಉತ್ತರಿಸಿದರು.

‘ರಾಜ್ಯಸಭೆ ಚುನಾವಣೆಯಲ್ಲಿ ಕೆಲವರು ತಮ್ಮ ಅಭ್ಯರ್ಥಿಗೆ ಮತ ಹಾಕಿ ಎಂದು ಸಹಾಯ ಕೇಳಿದ್ದರು. ಬೇಕಿದ್ದರೇ ಹಣ ಕೊಡುತ್ತೇವೆ ಮತ ಹಾಕುವುದಿಲ್ಲ ಎಂದು ಹೇಳಿದ್ದೆವು’ ಎಂದು ಸೋಮವಾರ ತಿಳಿಸಿದರು.

ADVERTISEMENT

‘ಬಿಜೆಪಿಯವರ ಬಳಿ ಹಣ ಇದೆ. ಆಫರ್ ಕೊಡುತ್ತಾರೆ. ನನ್ನ ಹತ್ತಿರ ಬಂದಿಲ್ಲ. ಡಿ.ಕೆ.ಶಿವಕುಮಾರ್ ಏಕೆ ಹೀಗೆ ಹೇಳಿದ್ದಾರೋ ಗೊತ್ತಿಲ್ಲ.ನಮ್ಮನ್ನು ಯಾರೂ ಭೇಟಿ ಮಾಡಿಲ್ಲ. ಮಾಡುವ ಪ್ರಶ್ನೆಯೂ ಬರುವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ದಾವಣಗೆರೆ: ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ – ಜೆಡಿಎಸ್ 55 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪವನ್ನು ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಳ್ಳಿ ಹಾಕಿದ್ದಾರೆ.

‘ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರು ಸಂಪರ್ಕಸಿದ್ದರು ಎಂಬ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಆರೋಪದ ಬಗ್ಗೆ ಅವರನ್ನೇ ಕೇಳಿ ಆಪರೇಷನ್ ಕಮಲ ಸುಳ್ಳು ನನ್ನನ್ನು ಯಾರೂ ಭೇಟಿ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ. ನನಗೆ ದುಡ್ಡು ಕೊಟ್ಟಿದ್ದರೆ ಎಣಿಸಿಕೊಂಡು ಇಟ್ಟುಕೊಳ್ಳುತ್ತಿದ್ದೆ. ಬಿಜೆಪಿಯವರು ಜೆಡಿಎಸ್ ನವರು ಹಾಗೂ ಕಾಂಗ್ರೆಸ್ ನವರು ಸೇರಿದಂತೆ ಯಾರೂ ಬಂದಿಲ್ಲ. ಹಣದ ಆಮೀಷ ಯಾರೂ ಒಡ್ಡಿಲ್ಲ.

ಸರ್ಕಾರ ಪತನಗೊಳಿಸಲು ನನ್ನನ್ನು ಸಂಪರ್ಕಿಸಿದ್ದರು ಎಂಬ ಮಾತು ಹೇಳಿರುವ ಡಿ. ಕೆ. ಶಿವಕುಮಾರ್ ಅವರನ್ನೇ ಕೇಳಿ. ನನ್ನನ್ನು ಏನು ಕೇಳುತ್ತೀರಾ ಎಂದು ಪ್ರಶ್ನಿಸಿದರು. ರಾಜ್ಯಸಭೆ ಚುನಾವಣೆ ವೇಳೆ ಸಹಾಯ ಮಾಡುವಂತೆ ಕೇಳಿದರು. ದುಡ್ಡು ಕೊಡುತ್ತೇವೆಂದು ಯಾರೂ ಹೇಳಿಲ್ಲ. ನಾವು ಮತ ಕೇಳಬೇಡಿ. ದುಡ್ಡು ಬೇಕಾದರೆ ನಾವೇ ಸಹಾಯ ಮಾಡುತ್ತೇವೆ ಎಂದು ಹೇಳಿದ್ದೆ. ಆದ್ರೆ ನಮ್ಮ ಮತಗಳನ್ನು ಕೇಳಬೇಡಿ ಎಂದು ಹೇಳಿದ್ದು ನಿಜ. ಆದ್ರೆ ಹಣದ ಆಮಿಷ ಯಾರೂ ಒಡ್ಡಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.