ADVERTISEMENT

ಹೊನ್ನಾಳಿ: ‘ವಿಬಿ–ಜಿ ರಾಮ್ ಜಿ' ಜನಜಾಗೃತಿಗೆ 8 ಕಿ.ಮೀ. ಪಾದಯಾತ್ರೆ ಮಾಡಿದ ಬಿಜೆಪಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 3:11 IST
Last Updated 18 ಫೆಬ್ರುವರಿ 2026, 3:11 IST
ಹೊನ್ನಾಳಿ ತಾಲ್ಲೂಕಿನ ಹನುಮಸಾಗರ ಗ್ರಾಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪಾದಯಾತ್ರೆ ನಡೆಸಿದರು
ಹೊನ್ನಾಳಿ ತಾಲ್ಲೂಕಿನ ಹನುಮಸಾಗರ ಗ್ರಾಮದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪಾದಯಾತ್ರೆ ನಡೆಸಿದರು   

ಹೊನ್ನಾಳಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೂಪಿಸಿರುವ ವಿಬಿ –ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಅವಳಿ ತಾಲ್ಲೂಕಿನಲ್ಲಿ ನಿರಂತರವಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು. 

ತಾಲ್ಲೂಕಿನ ಕೊನಾಯಕನಹಳ್ಳಿ, ಬಳ್ಳೇಶ್ವರ, ಹನುಮಸಾಗರ ಗ್ರಾಮದವರೆಗೆ ಮಂಗಳವಾರ 8 ಕಿ.ಮೀ. ಪಾದಯಾತ್ರೆ ನಡೆಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. 

‘ಕಾಯ್ದೆ ಬಗ್ಗೆ ಅರಿವು ಮೂಡಿಸಲು ಫೆ. 21ರಂದು ತಾಲ್ಲೂಕಿನ ಘಂಟಾಪುರದಿಂದ ತರಗನಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಮಧ್ಯಾಹ್ನ 3 ಗಂಟೆಗೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ’ ಎಂದು ಹೇಳಿದರು. 

ADVERTISEMENT

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಮುಖಂಡರಾದ ಕೆ.ಪಿ. ಕುಬೇಂದ್ರಪ್ಪ, ಸಿ.ಆರ್. ಶಿವಾನಂದ್ ಮಾತನಾಡಿದರು. 

ಮುಖಂಡರಾದ ತರಗನಹಳ್ಳಿ ರಮೇಶ್ ಗೌಡ, ಕೊನಾಯಕನಹಳ್ಳಿ ಮಂಜುನಾಥ್, ಪುರಸಭೆಯ ಮಾಜಿ ಅಧ್ಯಕ್ಷರಾದ ಕೆ.ವಿ. ಶ್ರೀಧರ್, ರಂಗನಾಥ್, ಬಾಬು ಹೋಬಳದಾರ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.