
ಹೊನ್ನಾಳಿ: ‘ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಘೋಷಣೆಯಾದರು ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರು ಸಿದ್ಧರಾಗಿದ್ದಾರೆ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸೋಮವಾರ ಗುರುಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ, ವಿಬಿಜಿ ರಾಮ್‍ಜಿ ಯೋಜನೆ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರವಾಗಿ ಹಮ್ಮಿಕೊಂಡಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಹೊನ್ನಾಳಿ ಪುರಸಭೆ ಹಾಗೂ ನ್ಯಾಮತಿ ಪಟ್ಟಣ ಪಂಚಾಯಿತಿಯನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವುದೇ ನಮ್ಮ ಗುರಿ. ಅದಾದ ನಂತರ 2028ರ ಸಾರ್ವತ್ರಿಕ ಚುನಾವಣೆಯಲ್ಲೂ ನಾವು ಜಯಭೇರಿ ಬಾರಿಸಲಿದ್ದೇವೆ ಎಂದು ಹೇಳಿದರು.
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಬಳ್ಳಾರಿ ಘಟನೆ, ಮಹಿಳೆಯ ವಿವಸ್ತ್ರ ವಿಚಾರ, ಅಧಿಕಾರಿಗಳ ಮೇಲೆ ದೌರ್ಜನ್ಯ ಮತ್ತು ಅಬಕಾರಿ ಹಗರಣಗಳೇ ಕಾಂಗ್ರೆಸ್ ಸರ್ಕಾರದ ಸಾಧನೆಗಳಾಗಿವೆ ಎಂದು ದೂರಿದರು.
ಜಿ.ಪಂ. ಮಾಜಿ ಸದಸ್ಯ ಸುರೇಂದ್ರನಾಯ್ಕ, ರಾಜ್ಯ ಬಿಜೆಪಿ ಒಬಿಸಿ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ಮುಖಂಡ ಮಂಜುನಾಥ ನೆಲಹೊನ್ನೆ, ಮಾಜಿ ಅಧ್ಯಕ್ಷ ಜೆ.ಕೆ. ಸುರೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರಕೆರೆ ನಾಗರಾಜ್, ಬಾಬು ಹೋಬಳದಾರ್ ಮಾತನಾಡಿದರು.
ಕಡ್ಲೆಬಾಳು ಧನಂಜಯ್, ಮುಖಂಡರಾದ ಮಂಜುನಾಥ್ ಇಂಚರ, ರಮೇಶ್‍ಗೌಡ, ಡಿ.ಜಿ. ರಾಜಪ್ಪ, ಸಿ.ಆರ್. ಶಿವಾನಂದ, ಎಂ.ಎಸ್. ಫಾಲಾಕ್ಷಪ್ಪ, ಮಾರುತಿನಾಯ್ಕ, ಲಿಂಗರಾಜ್ ಹವಳದ, ಪುರಸಭೆ ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.