ADVERTISEMENT

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು: ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 16:26 IST
Last Updated 10 ನವೆಂಬರ್ 2020, 16:26 IST
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಹಾಗೂ ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿರುವ ನಿಮಿತ್ತ ದಾವಣಗೆರೆಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಹಾಗೂ ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿರುವ ನಿಮಿತ್ತ ದಾವಣಗೆರೆಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.   

ದಾವಣಗೆರೆ: ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಹಾಗೂ ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿರುವ ನಿಮಿತ್ತ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗನವಾಡಿ ಮಾತನಾಡಿ, ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತ ವೈಖರಿ ಮೆಚ್ಚಿ ಮತದಾರರು ತೀರ್ಪು ನೀಡಿದ್ದಾರೆ ಎಂದು ತಿಳಿಸಿದರು.

ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ವಿವಿಧ ವರ್ಗದ ಜನರಿಗೆ ಸಿಎಂ ಧನಸಹಾಯ ನೀಡಿದರು. ಆಯುಷ್ಮಾನ್ ಭಾರತ ಯೋಜನೆಯ ಪ್ರಯೋಜನವನ್ನು ಬಡ ಕುಟುಂಬಗಳು ಪಡೆದವು ಎಂದು ಹೇಳಿದರು.

ADVERTISEMENT

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಜಗದೀಶ್ ಮಾತನಾಡಿ, ‘ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ’ ಎಂದು ಹರ್ಷ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸದಸ್ಯೆ ದೇವೀರಮ್ಮ, ಪಾಲಿಕೆ ಸದಸ್ಯರಾದ ಗಾಯತ್ರಿ ಖಂಡೋಜಿರಾವ್, ಸೋಗಿ ಶಾಂತಕುಮಾರ್, ರಾಕೇಶ್ ಜಾಧವ್, ಆರ್.ಎಲ್. ಶಿವಪ್ರಕಾಶ್, ಶಿವನಗೌಡ, ಮುಖಂಡರಾದ ಸಂಗನಗೌಡ್ರು, ಉಮೇಶ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.