ADVERTISEMENT

ಆರು ಮಂದಿಯಲ್ಲಿ ಕಪ್ಪು ಶಿಲೀಂಧ್ರ ಪತ್ತೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 4:32 IST
Last Updated 17 ಜೂನ್ 2021, 4:32 IST
ಕಪ್ಪು ಶಿಲೀಂಧ್ರ
ಕಪ್ಪು ಶಿಲೀಂಧ್ರ   

ದಾವಣಗೆರೆ: ಎಸ್‌ಎಸ್‌ ಹೈಟೆಕ್‌ ಆಸ್ಪತ್ರೆಯಲ್ಲಿ ಐದು ಮಂದಿಗೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಒಬ್ಬರಿಗೆ ಕಪ್ಪು ಶಿಲೀಂಧ್ರ ಇರುವುದು ಬುಧವಾರ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಲ್ಲಿವರೆಗೆ ಒಟ್ಟು 88 ಮಂದಿಯಲ್ಲಿ ಕಪ್ಪು ಶಿಲೀಂಧ್ರ ಕಾಣಿಸಿಕೊಂಡಿದ್ದು, ಅದರಲ್ಲಿ 37 ಮಂದಿ ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 52 ಪ್ರಕರಣ ದೃಢಪಟ್ಟಿದ್ದು, 23 ಮಂದಿ ಗುಣಮುಖರಾಗಿದ್ದಾ‌ರೆ. ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯಲ್ಲಿ 33 ಮಂದಿಯಲ್ಲಿ ಶಿಲೀಂಧ್ರ ಕಾಣಿಸಿಕೊಂಡಿದ್ದು, 13 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಿಡುಗಡೆಗೊಂಡಿದ್ದಾರೆ. ಕಾಲೇಜ್‌ ಆಫ್ ಡೆಂಟಲ್‌ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಕೊರೊನಾದಿಂದ ಏಳು ಸಾವು: ಕೊರೊನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿರುವುದು ಬುಧವಾರ ದೃಢಪಟ್ಟಿದೆ.

ADVERTISEMENT

ದಾವಣಗೆರೆ ತಾಲ್ಲೂಕಿನ ಅಣಬೇರಿನ 55 ವರ್ಷದ ಪುರುಷ, ಜಾಲಿನಗರದ 62 ವರ್ಷದ ವೃದ್ಧ, ವಿನೋಬನಗರದ 79 ವರ್ಷದ ವೃದ್ಧ, ನಾಯಕರ ನಗರದ 66 ವರ್ಷದ ವೃದ್ಧೆ, ಹೊನ್ನಾಳಿ ತಾಲ್ಲೂಕಿನ ಕೊನೆಯಕಣಹಳ್ಳಿಯ 70 ವರ್ಷದ ವೃದ್ಧ, ಹರಿಹರದ ದೊಡ್ಡಬೀದಿಯ 65 ವರ್ಷದ ವೃದ್ಧೆ, ಚನ್ನಗಿರಿ ತಾಲ್ಲೂಕಿನ ಹಳ್ಳಿಮಲ್ಲಾಪುರದ 24 ವರ್ಷದ ಯುವತಿ ಮೃತಪಟ್ಟವರು.

ದಾವಣಗೆರೆ ತಾಲ್ಲೂಕಿನಲ್ಲಿ 101, ಹರಿಹರ ತಾಲ್ಲೂಕಿನಲ್ಲಿ 19, ಚನ್ನಗಿರಿ ತಾಲ್ಲೂಕಿನಲ್ಲಿ 37, ಹೊನ್ನಾಳಿ ತಾಲ್ಲೂಕಿನ 27, ಜಗಳೂರು ತಾಲ್ಲೂಕಿನಲ್ಲಿ 12 ಮಂದಿಗೆ ಕೊರೊನಾ ಬಂದಿದೆ. ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಗಳ 11 ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.