ADVERTISEMENT

ನಾಲ್ವರಿಗೆ ಕಪ್ಪು ಶಿಲೀಂಧ್ರ ದೃಢ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 6:29 IST
Last Updated 10 ಜೂನ್ 2021, 6:29 IST
ಕಪ್ಪು ಶಿಲೀಂಧ್ರ
ಕಪ್ಪು ಶಿಲೀಂಧ್ರ   

ದಾವಣಗೆರೆ: ಜಿಲ್ಲೆಯಲ್ಲಿ ನಾಲ್ವರಿಗೆ ಕಪ್ಪು ಶಿಲೀಂಧ್ರ ಇರುವುದು ಬುಧವಾರ ದೃಢಪಟ್ಟಿದೆ. ನಾಲ್ವರು ಕೂಡ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಲ್ಲಿವರೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 39 ಪ್ರಕರಣ ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿದ್ದಾ‌ರೆ. ಎಸ್‌.ಎಸ್‌. ಹೈಟೆಕ್‌ ಆಸ್ಪತ್ರೆಯಲ್ಲಿ 25 ಮಂದಿಯಲ್ಲಿ ಶಿಲೀಂಧ್ರ ಕಾಣಿಸಿಕೊಂಡಿದ್ದು, 6 ಮಂದಿ ಗುಣಮುಖರಾಗಿದ್ದಾರೆ. ಬಾಪೂಜಿ ಆಸ್ಪತ್ರೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಬ್ಬರು ಬಿಡುಗಡೆಗೊಂಡಿದ್ದಾರೆ. ಕಾಲೇಜ್‌ ಆಫ್ ಡೆಂಟಲ್‌ ಸೈನ್ಸ್‌ನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಕೊರೊನಾದಿಂದ ಏಳು ಮಂದಿ ಸಾವು: ಕೊರೊನಾ ಸೋಂಕಿನಿಂದ ಏಳು ಮಂದಿ ಮೃತಪಟ್ಟಿರುವುದು ಬುಧವಾರ ದೃಢಪಟ್ಟಿದೆ.

ADVERTISEMENT

ಚನ್ನಗಿರಿ ತಾಲ್ಲೂಕು ಅರಿಶಿನಘಟ್ಟದ 40 ವರ್ಷದ ಪುರುಷ, ದಾವಣಗೆರೆ ಕೃಷ್ಣ ನಗರದ 36 ವರ್ಷದ ಪುರುಷ, ದೇವರಾಜ ಅರಸು ಬಡಾವಣೆಯ 70 ವರ್ಷದ ವೃದ್ಧ, ಕುವೆಂಪು ನಗರದ 67 ವರ್ಷದ ವೃದ್ಧ, ಹೊನ್ನಾಳಿ ತಾಲ್ಲೂಕು ತಿಮ್ಲಾಪುರದ 54 ವರ್ಷದ ಪುರುಷ, ಒಡೇರಹತ್ತೂರಿನ 40 ವರ್ಷದ ಮಹಿಳೆ, ನ್ಯಾಮತಿ ಹಿರೇಮಳಲಿಯ 68 ವರ್ಷದ ವೃದ್ಧೆ ಮೃತಪಟ್ಟವರು.

ದಾವಣಗೆರೆ ತಾಲ್ಲೂಕಿನಲ್ಲಿ 102, ಹರಿಹರ ತಾಲ್ಲೂಕಿನಲ್ಲಿ 30, ಚನ್ನಗಿರಿ ತಾಲ್ಲೂಕಿನಲ್ಲಿ 26, ಹೊನ್ನಾಳಿ ತಾಲ್ಲೂಕಿನ 41, ಜಗಳೂರು ತಾಲ್ಲೂಕಿನಲ್ಲಿ 23 ಮಂದಿಗೆ ಕೊರೊನಾ ಬಂದಿದೆ. ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಗಳ 5ಮಂದಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.