ADVERTISEMENT

ಬಾಂಧವ್ಯ ಬೆಳೆಯಲು ರಕ್ತದಾನ ಸಹಕಾರಿ: ಎಎಸ್‌ಪಿ

​ಪ್ರಜಾವಾಣಿ ವಾರ್ತೆ
Published 16 ಜೂನ್ 2019, 14:19 IST
Last Updated 16 ಜೂನ್ 2019, 14:19 IST
ದಾವಣಗೆರೆ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಭಾನುವಾರ ನಡೆದ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಎಎಸ್‌ಪಿ ಟಿ.ಎಸ್‌. ಉದೇಶ್‌ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು
ದಾವಣಗೆರೆ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಭಾನುವಾರ ನಡೆದ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಎಎಸ್‌ಪಿ ಟಿ.ಎಸ್‌. ಉದೇಶ್‌ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು   

ದಾವಣಗೆರೆ: ಜಿಲ್ಲೆಯ ಹಲವು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಪೊಲೀಸರು ಮತ್ತು ಸಾರ್ವಜನಿಕರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಸಲು ರಕ್ತದಾನ ಶಿಬಿರ ಸಹಕಾರಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಟಿ.ಜೆ. ಉದೇಶ್ ಹೇಳಿದರು.

ಜಿಲ್ಲಾ ಪೊಲೀಸ್ ಮತ್ತು ಚಿಗಟೇರಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಘಟಕದ ಆಶ್ರಯದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಭಾನುವಾರ ನಡೆದ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

50ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರಕ್ತದಾನ ಮಾಡಿದರು. 20ಕ್ಕೂ ಹೆಚ್ಚು ಮಂದಿ ಸಾರ್ವಜನಿಕರೂ ರಕ್ತದಾನ ಮಾಡಿದರು.

ADVERTISEMENT

ಡಿಸಿಐಬಿ ಘಟಕದ ಪೊಲೀಸ್ ನಿರೀಕ್ಷಕ ಲಕ್ಷ್ಮಣ್ ನಾಯ್ಕ್, ಆರ್‌ಪಿಐ ಎಸ್.ಎನ್. ಕಿರಣ್ ಕುಮಾರ, ಎಫ್‌ಬಿಬಿ ಘಟಕದ ಪೊಲೀಸ್ ನಿರೀಕ್ಷಕ ರುದ್ರೇಶ್, ರಕ್ತನಿಧಿ ವೈದ್ಯಾಧಿಕಾರಿ ಎಸ್.ಎನ್. ಸವಿತಾದೇವಿ, ಲ್ಯಾಬ್ ಟೆಕ್ನಿಷಿಯನ್‌ಗಳಾದ ದೇವರಾಜ, ಗಿರೀಶ್, ಸ್ನಾತಕೊತ್ತರ ವೈದ್ಯಕೀಯ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.