ADVERTISEMENT

ಜೀತಪದ್ಧತಿ | ಮಾನವ ಹಕ್ಕುಗಳ ಉಲ್ಲಂಘನೆ: ಎಚ್. ಮೋಹನ್

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 7:23 IST
Last Updated 12 ಫೆಬ್ರುವರಿ 2026, 7:23 IST
ಚನ್ನಗಿರಿಯ ರಂಗನಾಥ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡೆದ ಜೀತಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮೋಹನ್ ಉದ್ಘಾಟಿಸಿದರು 
ಚನ್ನಗಿರಿಯ ರಂಗನಾಥ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ನಡೆದ ಜೀತಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮೋಹನ್ ಉದ್ಘಾಟಿಸಿದರು    

ಚನ್ನಗಿರಿ: ‘ಜೀತಪದ್ಧತಿಯು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಕಾನೂನು ಬಾಹಿರವೂ ಆಗಿದೆ’ ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಮೋಹನ್ ತಿಳಿಸಿದರು.

ರಂಗನಾಥ ವಿದ್ಯಾಸಂಸ್ಥೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ  ಜೀತಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜೀತಪದ್ಧತಿಯು ಊಳಿಗಮಾನ್ಯ ಪದ್ಧತಿಯ ಉಳಿಕೆ. ಇದು ವ್ಯಕ್ತಿಯ ಸ್ವಾತಂತ್ರ್ಯ ಮತ್ತು ಘನತೆಯನ್ನು ಕಸಿದುಕೊಳ್ಳುತ್ತದೆ. ಜಾತಿ ಮತ್ತು ಆರ್ಥಿಕ ಅಸಮಾನತೆಯನ್ನು ಹೆಚ್ಚಿಸುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ADVERTISEMENT

ಮುಖ್ಯಶಿಕ್ಷಕ ಜೆ.ಎಸ್. ಅರುಣ್ ಕುಮಾರ್, ವಿದ್ಯಾಸಂಸ್ಥೆಯ ನಿರ್ದೇಶಕ ವಿಷ್ಣು, ಸಂಯೋಜಕ ಭಾರ್ಗವ್, ವಕೀಲರ ಸಂಘದ ಉಪಾಧ್ಯಕ್ಷ ಸಿ. ತಿಪ್ಪೇಶ್, ಕಾರ್ಯದರ್ಶಿ ಜಿ.ಎಸ್. ಮೋಹನ್, ಜಿ.ಎಸ್. ವೀರಭದ್ರಪ್ಪ, ಕೆ. ಬಸಪ್ಪ, ಬಿ.ಎನ್. ನಿಂಗರಾಜ್ ಉಪಸ್ಥಿತರಿದ್ದರು. ರಂಗನಾಥ ವಿದ್ಯಾಸಂಸ್ಥೆ ಕಾರ್ಯದರ್ಶಿ ಪಿ.ಎಸ್. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.