ಬಸವಾಪಟ್ಟಣ: ‘ಘೋಷಣೆಗಳಿಂದ ಮಾತ್ರ ಪರಿಸರ ರಕ್ಷಣೆ ಅಸಾಧ್ಯ. ಈ ಭಾವನೆ ಮಕ್ಕಳಲ್ಲಿ ಬಾಲ್ಯದಿಂದಲೇ ಬೆಳೆಯಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆರ್.ಹಾಲೇಶ್ ಹೇಳಿದರು.
ಗುರುವಾರ ಇಲ್ಲಿನ ರಾಘವೇಂದ್ರ ಮತ್ತು ಜನತಾ ಪ್ರೌಢಶಾಲೆಗಳಲ್ಲಿ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ನಡೆದ ವಿಶ್ವ ಪರಿಸರ ದಿನದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
‘ಮಾನವನಿಂದ ನಿತ್ಯ ನಡೆಯುತ್ತಿರುವ ದೌರ್ಜನ್ಯದಿಂದ ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗುತ್ತಿದೆ. ರೋಗಗಳು ಹೆಚ್ಚಾಗುತ್ತಿವೆ. ಗಾಳಿ, ನೀರು, ಭೂಮಿ ಕಲುಷಿತಗೊಳ್ಳುತ್ತಿವೆ. ಇದನ್ನು ತಡೆಯಲು ಮಕ್ಕಳಿಗೆ ಬಾಲ್ಯದಿಂದಲೇ ತರಬೇತಿ ನೀಡಬೇಕು’ ಎಂದು ಹೇಳಿದರು.
ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿದರು. ವಿದ್ಯಾರ್ಥಿಗಳಿಂದ ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ ನಡೆಯಿತು. ಜನತಾ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಜಿ.ಮಂಜುನಾಥ ಸ್ವಾಮಿ, ಮುಖ್ಯ ಶಿಕ್ಷಕರಾದ ಕೆ.ಶಾಂತರಾಜ್, ಹರಿಹರ ಪಟಗಾರ, ಅಧ್ಯಾಪಕ ವರ್ಗ, ಮೇಲ್ವಿಚಾರಕರಾದ ದುರ್ಗಾಭವಾನಿ, ಶಂಭುಲಿಂಗಯ್ಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.