ADVERTISEMENT

ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಬಿಎಸ್‌ಪಿ ಮುಖಂಡರು ವಶಕ್ಕೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 6:26 IST
Last Updated 24 ಏಪ್ರಿಲ್ 2022, 6:26 IST

ಹರಿಹರ: ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ ಮಾಡುವ ಸಾಧ್ಯತೆಯ ಕಾರಣಕ್ಕಾಗಿ ಬಹುಜನ ಸಮಾಜ ಪಾರ್ಟಿಯ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.

ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಹರಿಹರದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ ಸ್ವಾಮಿ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದಿದ್ದು, ಅವರು ಮುಖ್ಯಮಂತ್ರಿ ಜತೆಗೆ ಭಾಗವಹಿಸಬಾರದು ಎಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುವ ಶಂಕೆ ಇತ್ತು. ಅದಲ್ಲಾಗಿ ಬಿಎಸ್‌ಪಿ ಮುಖಂಡರಾದ ಎಚ್. ಮಲ್ಲೇಶ್, ಡಿ. ಹನುಮಂತಪ್ಪ ಸಹಿತ ಹಲವರನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT