ಚನ್ನಗಿರಿ: ತಾಲ್ಲೂಕು ಜೋಳದಹಾಳ್ ಗ್ರಾಮದ ಬಳಿ ರಾಜ್ಯ ಹೆದ್ದಾರಿ 65ರಲ್ಲಿ ಖಾಸಗಿ ಬಸ್‌ಗಳೆರಡು ಬುಧವಾರ ಮುಖಾಮುಖಿ ಡಿಕ್ಕಿಯಾಗಿ 40 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಚನ್ನಗಿರಿಯಿಂದ ಭದ್ರಾವತಿ ಹಾಗೂ ಭದ್ರಾವತಿಯಿಂದ ಚನ್ನಗಿರಿಗೆ ಬರುತ್ತಿದ್ದ ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದವು. ಅದೃಷ್ಟವಶಾತ್ ಪ್ರಾಣಹಾನಿಯಾಗಿಲ್ಲ.
ಎರಡು ಬಸ್‌ಗಳ 40 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚನ್ನಗಿರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮನೆಗಳಿಗೆ ಕಳುಹಿಸಲಾಗಿದೆ. ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಪ್ರಶಾಂತ್ ಜಿ. ಮುನ್ನೋಳಿ, ಸಿಪಿಐ ಆರ್.ಆರ್. ಪಾಟೀಲ್ ಹಾಗೂ ಎಸ್ಐ ಜಗದೀಶ್ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲು ನೆರವಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.