ADVERTISEMENT

ಬಸ್ ಪ್ರಯಾಣ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2021, 10:16 IST
Last Updated 7 ಜುಲೈ 2021, 10:16 IST
ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ) ಜಿಲ್ಲಾ ಘಟಕದಿಂದ ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ
ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ) ಜಿಲ್ಲಾ ಘಟಕದಿಂದ ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ಖಂಡಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್ ) ಜಿಲ್ಲಾ ಘಟಕದಿಂದ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

ಸಂಘನೆಯ ಜಿಲ್ಲಾ ಕಾರ್ಯದರ್ಶಿ ಮಜುನಾಥ್ ಕೈದಾಳೆ ಮಾತನಾಡಿ, ‘ಕೋವಿಡ್‌ನಿಂದಾಗಿ ಜನಜೀವನ ದುಸ್ತರವಾಗಿರುವ ಇಂದಿನ ದಿನಗಳಲ್ಲಿ ಆಡಳಿತ ಪಕ್ಷಗಳು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸದೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದೆ. ಇಷ್ಟು ಸಾಲದೆಂಬಂತೆ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಅಕ್ಷಮ್ಯ’ ಎಂದು ಆರೋಪಿಸಿದರು.

‘ಕೆಎಸ್‌ಆರ್‌ಟಿಸಿ ಸೇವಾ ವಲಯವಾಗಿದ್ದು, ಜನಸಾಮಾನ್ಯರಿಗೆ ಉಚಿತ ಸೇವೆಯನ್ನು ನೀಡಬೇಕಿತ್ತು. ಆದರೆ ಸಂಸ್ಥೆ ಹಾಗೂ ಸರ್ಕಾರವು ಲಾಭ-ನಷ್ಟದ ಲೆಕ್ಕಾಚಾರದಲ್ಲಿ, ಡೀಸೆಲ್ ದರ ಹೆಚ್ಚಳದ ನೆಪ ಹೇಳಿ ಪ್ರಯಾಣ ದರ ಹೆಚ್ಚಿಸಿರುವುದು ಜನರಿಗೆ ಮಾಡಿದ ದ್ರೋಹವಾಗಿದೆ. ಕೂಡಲೇ ಪ್ರಯಾಣ ದರವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯ’ ಎಂದು ಹೇಳಿದರು.

ADVERTISEMENT

ಬಸ್ ಪ್ರಯಾಣ ದರವನ್ನು ಕೂಡಲೇ ಹಿಂಪಡೆಯಬೇಕು. ನಗರದಿಂದ ಎಲ್ಲಾ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಡಿಟಿಒ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸುನೀತ್ ಕುಮಾರ್, ಮಂಜುನಾಥ್ ಕುಕ್ಕುವಾಡ, ತಿಪ್ಪೇಸ್ವಾಮಿ ಅಣಬೇರು, ಮಧು ತೊಗಲೇರಿ, ಭಾರತಿ, ಪರಶುರಾಮ್, ನಾಗಜ್ಯೋತಿ, ಪೂಜಾ, ಕಾವ್ಯಾ, ನಾಗಸ್ಮಿತಾ, ಪುಷ್ಪಾ, ಗುರು, ಮಮತಾ, ಅನಿಲ್, ಬಸವರಾಜ್ ಬಾವಿಹಾಳ್, ಲಕ್ಷ್ಮಣ್ ಮಾಯಕೊಂಡ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.