ADVERTISEMENT

ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ: ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 29 ಜೂನ್ 2021, 16:16 IST
Last Updated 29 ಜೂನ್ 2021, 16:16 IST
ಬೈರತಿ ಬಸವರಾಜ
ಬೈರತಿ ಬಸವರಾಜ   

ದಾವಣಗೆರೆ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹೇಳಿದರು.

ದಾವಣಗೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಜಯೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದು, ಅವರು ಎಲ್ಲಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆಗಳು ಆಗಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಚರ್ಚೆ ಮಾಡಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಾರೆ’ ಎಂದು ಹೇಳಿದರು.

ADVERTISEMENT

‘ಶಾಸಕ ಮುನಿರತ್ನ ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.