ADVERTISEMENT

ಸಿಎಂ ದೆಹಲಿ ಭೇಟಿಗೆ ವಿಶೇಷ ಅರ್ಥ ಇಲ್ಲ: ಸಚಿವ ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 8:19 IST
Last Updated 18 ಜುಲೈ 2021, 8:19 IST
ಬೈರತಿ ಬಸವರಾಜ
ಬೈರತಿ ಬಸವರಾಜ   

ದಾವಣಗೆರೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, 'ಪಕ್ಷದ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಹಾಗೆಂದ ಮಾತ್ರಕ್ಕೆ ಬದಲಾವಣೆ ಮಾಡಲಾಗುತ್ತದೆ ಎಂಬುದು ಸರಿಯಲ್ಲ' ಎಂದು ಅಭಿಪ್ರಾಯಪಟ್ಟರು.

ದೆಹಲಿಗೆ ಯಾರು ಬೇಕಾದರೂ ಹೋಗಿ ಬರಬಹುದು. ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೆಲಸ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡುತ್ತೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ ಎಂದರು.

ADVERTISEMENT

ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾಧ್ಯಮಗಳಲ್ಲಿ ಚರ್ಚೆಯಾದ ಮಾತ್ರಕ್ಕೆ ನಿಖರ ಅಲ್ಲ. ಸಿಎಂ ಯಡಿಯೂರಪ್ಪ ಅವರು ಖಚಿತವಾಗಿ ವಿಸ್ತರಣೆಯಾಗಲೀ, ಪುನಾರಚನೆ ಬಗ್ಗೆ ಆಗಲಿ ಎಲ್ಲಿಯೂ ಹೇಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.