ಜಗಳೂರು: ತಾಲೂಕಿನ ದೊಣೆಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದು, ಮಹಿಳೆ ಹಾಗೂ ಬಾಲಕಿ ಗಾಯಗೊಂಡಿದ್ದಾರೆ.
ಚಿತ್ರದುರ್ಗ ನಗರದ ಐಡಿಪಿ ಲೇಔಟ್ ನಿವಾಸಿ ತರಕಾರಿ ವ್ಯಾಪಾರಿ ಮಂಜಣ್ಣ (57) ಮೃತಪಟ್ಟವರು.
ಚಿತ್ರದುರ್ಗದಿಂದ ಕಾನಾಹೊಹಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.
ಗಾಣಾಗಟ್ಟೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.