ADVERTISEMENT

ಕಾರು ಡಿಕ್ಕಿ: ಪಾದಚಾರಿಗೆ ಗಾಯ, 3 ಕುರಿಗಳು ಸಾವು

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2020, 13:07 IST
Last Updated 13 ಡಿಸೆಂಬರ್ 2020, 13:07 IST
ಹೊನ್ನಾಳಿ ತಾಲ್ಲೂಕು ಸೊರಟೂರು ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅಪಘಾತದಲ್ಲಿ ಶಾಂತವೀರಪ್ಪ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದರು
ಹೊನ್ನಾಳಿ ತಾಲ್ಲೂಕು ಸೊರಟೂರು ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಅಪಘಾತದಲ್ಲಿ ಶಾಂತವೀರಪ್ಪ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದರು   

ಹೊನ್ನಾಳಿ: ತಾಲ್ಲೂಕಿನ ಸೊರಟೂರು ಗ್ರಾಮದ ಸಮೀಪದ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದು, ಮೂರು ಕುರಿಗಳು ಮೃತಪಟ್ಟಿವೆ. ಎರಡು ಹಸುಗಳು ಗಾಯಗೊಂಡಿವೆ.

ರೈತ ಶಾಂತವೀರಪ್ಪಶಿಕಾರಿಪುರ ಮುಖ್ಯರಸ್ತೆಯಲ್ಲಿ ಜಾನುವಾರು ಮೇಯಿಸಿಕೊಂಡು ಗ್ರಾಮಕ್ಕೆ ವಾಪಸ್ಸಾಗುತ್ತಿದ್ದಾಗ ಶಿಕಾರಿಪುರದಿಂದ ಹೊನ್ನಾಳಿಗೆ ಬರುತ್ತಿದ್ದ ಇನೊವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಶಾಂತವೀರಪ್ಪ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭಾನುವಾರ ಶಾಂತವೀರಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.