ADVERTISEMENT

ಜಗಳೂರು: ಜಾತಿಗಣತಿಗೆ ಶಾಸಕ.ಬಿ.ದೇವೇಂದ್ರಪ್ಪ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಮೇ 2025, 13:56 IST
Last Updated 6 ಮೇ 2025, 13:56 IST
ಜಗಳೂರು ತಾಲ್ಲೂಕಿನ ಬಸವನಕೋಟೆ ಗ್ರಾಮದಲ್ಲಿ ಜಾತಿ ಗಣತಿಗೆ ಶಾಸಕ ಬಿ.ದೇವೇಂದ್ರಪ್ಪ ಸೋಮವಾರ ಚಾಲನೆ ನೀಡಿದರು
ಜಗಳೂರು ತಾಲ್ಲೂಕಿನ ಬಸವನಕೋಟೆ ಗ್ರಾಮದಲ್ಲಿ ಜಾತಿ ಗಣತಿಗೆ ಶಾಸಕ ಬಿ.ದೇವೇಂದ್ರಪ್ಪ ಸೋಮವಾರ ಚಾಲನೆ ನೀಡಿದರು   

ಜಗಳೂರು: ಗಣತಿಯಲ್ಲಿ ಪರಿಶಿಷ್ಟ ಜಾತಿಗಳ ಉಪಜಾತಿಗಳ ವಿವರವನ್ನು ಗಣತಿದಾರರು ನಿಖರವಾಗಿ ನಮೂದಿಸಲು ನೆರವಾಗುವಂತೆ ಕುಟುಂಬದ ಸದಸ್ಯರು ಸಮರ್ಪಕ ಮಾಹಿತಿ ನೀಡಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಸಲಹೆ ನೀಡಿದರು.

ತಾಲ್ಲೂಕಿನ ಬಸವನಕೋಟೆ ಗ್ರಾಮದಲ್ಲಿ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಾತಿಗಣತಿ ದತ್ತಾಂಶ ಸಂಗ್ರಹ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಒಳಮೀಸಲಾತಿ ಜಾರಿ ಉದ್ದೇಶದಿಂದ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದವರ ಅಂಕಿ–ಅಂಶಗಳನ್ನು ಆನ್‌ಲೈನ್ ಆ್ಯಪ್ ಮೂಲಕ ಸಂಗ್ರಹಿಸುವ ಈ ಪ್ರಕ್ರಿಯೆಯಲ್ಲಿ ಗಣತಿದಾರರು ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಗಣತಿದಾರರು ಮನೆಬಾಗಿಲಿಗೆ ಆಗಮಿಸಿದಾಗ ಆಯಾ ಕುಟುಂಬಗಳ ಸದಸ್ಯರು ಮಾದಿಗ, ಛಲವಾದಿ, ಭೋವಿ, ಲಂಬಾಣಿ – ಈ ರೀತಿ ತಮ್ಮ ನಿರ್ದಿಷ್ಟ ಮಾಹಿತಿ ಒದಗಿಸಬೇಕು. ಇದರಿಂದ ಅನುಕೂಲವಾಗಲಿವೆ’ ಎಂದು ವಿವರಿಸಿದರು.

ADVERTISEMENT

‘ಮೇ15ರವರೆಗೆ ಗಣತಿ ನಡೆಯಲಿದೆ. ಆಧಾರ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಗಣತಿದಾರರಿಗೆ ನೀಡಬೇಕು. ಇದರಿಂದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ. ಸಾಮಾಜಿಕ ಅಸಮಾನತೆ, ತಾರತಮ್ಯವನ್ನು ಮುಕ್ತವಾಗಿ ಹಂಚಿಕೊಳ್ಳಬೇಕು’ ಎಂದು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರಪ್ಪ ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಇಒ ಕೆಂಚಪ್ಪ, ಸಿಡಿಪಿಒ ಬೀರೇಂದ್ರ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜಮ್ಮ, ಯಲ್ಲಮ್ಮ, ದೇವರಾಜ್, ಬಿ.ಟಿ.ಬಸವರಾಜ್, ಮುಖಂಡರಾದ ಬಿ.ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ, ಶಿಲ್ಪಾ, ಪಿಡಿೊ ರಾಘವೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.