ಬಸವಾಪಟ್ಟಣ: ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಪ್ರತಿ ಮನೆಗೆ ತೆರಳಿ ಗುರುತಿನ ಸ್ಟಿಕ್ಕರ್‌ಗಳನ್ನು ಅಂಟಿಸುವ ಕಾರ್ಯದಲ್ಲಿ ಇಲ್ಲಿನ ಬೆಸ್ಕಾಂ ಸಿಬ್ಬಂದಿ ನಿರತರಾಗಿದ್ದಾರೆ.
ಬೆಸ್ಕಾಂ ಶಾಖೆ ವ್ಯಾಪ್ತಿಯ ಎಂಟು ಗ್ರಾಮ ಪಂಚಾಯಿತಿಗಳಲ್ಲಿ 15,000 ಮನೆಗಳಿದ್ದು, 10 ಸಿಬ್ಬಂದಿ ಐದು ದಿನಗಳಿಂದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನೈದು ದಿನಗಳಲ್ಲಿ ಈ ಕಾರ್ಯ ಮುಗಿಯಲಿದೆ. ಸಮೀಕ್ಷೆಗಾಗಿ ಮನೆ ಬಾಗಿಲಿಗೆ ಬರುವ ಅಧಿಕಾರಿಗಳಿಗೆ ಸುಲಭವಾಗುವಂತೆ ಸ್ಟಿಕ್ಕರ್‌ನಲ್ಲಿ ಕ್ರಮ ಸಂಖ್ಯೆಯನ್ನು ನಮೂದಿಸಲಾಗಿದೆ.
ಎಲ್ಲ ಮನೆಗಳ ವಿದ್ಯುತ್ ಮೀಟರ್‌ನ ಆರ್.ಆರ್. ನಂಬರ್ ಅನ್ನು ಆಧಾರವಾಗಿರಿಸಿಕೊಂಡು ಸ್ಟಿಕ್ಕರ್‌ಗಳನ್ನು ಹಾಕಲಾಗುತ್ತಿದೆ. ಸೆಪ್ಟೆಂಬರ್ 20ರಿಂದ ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸಲಿದೆ ಎಂದು ಬೆಸ್ಕಾಂ ಶಾಖಾಧಿಕಾರಿ ನಾಗರಾಜನಾಯ್ಕ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.