ADVERTISEMENT

ಕುಂಕುವ | 2 ಗ್ರಾಮಗಳಿಗೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 8:36 IST
Last Updated 31 ಡಿಸೆಂಬರ್ 2025, 8:36 IST
ನ್ಯಾಮತಿ ತಾಲ್ಲೂಕು ಕುಂಕುವ ಗ್ರಾ.ಪಂ. ವ್ಯಾಪ್ತಿಯ ಕುಂಕುವ ಮತ್ತು ದೊಡ್ಡೆತ್ತಿನಹಳ್ಳಿ ಗ್ರಾಮಗಳಿಗೆ ಗ್ರಾ.ಪಂ. ವತಿಯಿಂದ ಸಿ.ಸಿ.ಟಿ.ವಿ ಕ್ಯಾಮೆರಗಳನ್ನು ಅಳವಡಿಸಿದ್ದು ಪಿಡಿಒ ಎಂ.ಜಯಪ್ಪ ಮತ್ತು ಗ್ರಾ.ಪಂ.ಮಾಜಿ ಅಧ್ಯಕ್ಷ ಚಂದನ್‌ಜಂಗ್ಲೀ ಅವರು ವೀಕ್ಷಿಸಿದರು. 

ಕುಂಕುವ: ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲ ಬಳಸಿಕೊಂಡು ಕುಂಕುವ ಮತ್ತು ದೊಡ್ಡೆತ್ತಿನಹಳ್ಳಿ ಗ್ರಾಮಗಳ ಮುಖ್ಯ ದ್ವಾರದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ಅಳವಡಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಜಯಪ್ಪ ತಿಳಿಸಿದರು.

‘ಸರ್ಕಾರದ ಮಾರ್ಗಸೂಚಿಯಂತೆ ಸಾರ್ವಜನಿಕರ ಹಿತದೃಷ್ಟಿಯಿಂದ, ಗ್ರಾಮಗಳಲ್ಲಿ ಕಳವು ಪ್ರಕರಣ, ಅಪರಾಧ ಕೃತ್ಯದಂತಹ ಅಹಿತಕರ ಘಟನೆಗಳು ನಡೆಯದಂತೆ ಹತೋಟಿ ತರುವ ದೃಷ್ಟಿಯಿಂದ ಆಯ್ದ ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಲಾಗಿದೆ. ಈಗಾಗಲೇ ಅವುಗಳು ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಪೊಲೀಸ್ ಇಲಾಖೆಗೂ ಅನುಕೂಲವಾಗಲಿದೆ’ ಎಂದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದನ್‌ಜಂಗ್ಲೀ ಮತ್ತು ಸಿಬ್ಬಂದಿಗ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.