ಚನ್ನಗಿರಿ: ಪೆಟ್ರೋಲ್ ಕೇಳುವ ನೆಪದಲ್ಲಿ ಬಂದ ಕಳ್ಳರು ತಾಲ್ಲೂಕಿನ ಗರಗ ಗ್ರಾಮದಲ್ಲಿ ಒಂಟಿ ಮನೆಯಲ್ಲಿದ್ದ ವೃದ್ಧೆಯಿಂದ 3 ತೊಲ ಬಂಗಾರದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.
ರತ್ನಮ್ಮ ಚಿನ್ನದ ಸರ ಕಳೆದುಕೊಂಡವರು. ರಾತ್ರಿ 8.30ರ ವೇಳೆ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ವೃದ್ಧೆಯ ಬಳಿ ಪೆಟ್ರೋಲ್ ಇದೆಯಾ ಎಂದು ಕೇಳಿದರು. ಆ ಬಳಿಕ ಕುಡಿಯಲು ನೀರು ಕೇಳಿದ್ದಾರೆ. ನೀರು ತರಲೆಂದು ರತ್ನಮ್ಮ ಅವರು ಒಳಗೆ ಹೋಗುತ್ತಿದ್ದಾಗ ಈ ಇಬ್ಬರು ರತ್ನಮ್ಮ ಅವರನ್ನು ಭದ್ರವಾಗಿ ಹಿಡಿದುಕೊಂಡು ಕೊರಳಲ್ಲಿ ಇದ್ದ ₹1.26 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.