ಚನ್ನಗಿರಿ: ಧರ್ಮಸ್ಥಳದ ಹೆಸರು ಕೆಡಿಸಲು ಮುಂದಾಗಿರುವವರ ವಿರುದ್ಧ ಆಗಸ್ಟ್ 29ರಂದು ಬಿಜೆಪಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ತಿಳಿಸಿದರು.
ಇಲ್ಲಿನ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜಕೀಯ ಲಾಭ ಪಡೆದುಕೊಳ್ಳಲು ಈ ಪ್ರತಿಭಟನೆ ಮಾಡುತ್ತಿಲ್ಲ. ಧರ್ಮದ ಉಳಿವಿಗಾಗಿ ಧರ್ಮಯುದ್ಧವನ್ನು ಮಾಡಲಾಗುತ್ತಿದೆ ಎಂದರು.
‘ಶಬರಿಮಲೆ, ತಿರುಪತಿ ಸೇರಿದಂತೆ ದೇಶದ ಪ್ರಮುಖ ಶ್ರದ್ಧಾಕೇಂದ್ರಗಳ ಹೆಸರನ್ನು ಹಾಳು ಮಾಡಲು ದುಷ್ಟ ಶಕ್ತಿಗಳು ಮುಂದಾಗಿವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.
ಅಂದು ಗಾಂಧಿ ವೃತ್ತದಿಂದ ಪ್ರಾರಂಭಗೊಳ್ಳುವ ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳು, ರಾಷ್ಟ್ರೀಯ ಹೆದ್ದಾರಿ 13ರ ಮೂಲಕ ಸಾಗಲಿದೆ. ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಕುಮಾರಸ್ವಾಮಿ, ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಕುಬೇಂದ್ರೋಜಿರಾವ್, ಕೆ.ಆರ್. ಜಗದೀಶ್, ಸುರೇಶ್ ದೊಡ್ಮನಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.