ADVERTISEMENT

ಲೈಂಗಿಕ ದೌರ್ಜನ್ಯ ಖಂಡಿಸಿ ಚನ್ನಗಿರಿ ಬಂದ್‌

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2025, 15:32 IST
Last Updated 3 ಫೆಬ್ರುವರಿ 2025, 15:32 IST
ಚನ್ನಗಿರಿಯಲ್ಲಿ ಸೋಮವಾರ ಅಂಗಡಿಗಳು ಮುಚ್ಚಿದ್ದರಿಂದ ಜನಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿದ್ದವು
ಚನ್ನಗಿರಿಯಲ್ಲಿ ಸೋಮವಾರ ಅಂಗಡಿಗಳು ಮುಚ್ಚಿದ್ದರಿಂದ ಜನಸಂಚಾರವಿಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿದ್ದವು   

ಚನ್ನಗಿರಿ (ದಾವಣಗೆರೆ): ಬಾಲಕಿಯರು ಸೇರಿ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣದ ಆರೋಪಿ ಅಮ್ಜದ್‌ನ ಕೃತ್ಯ ಖಂಡಿಸಿ ಸೋಮವಾರ ಕರೆನೀಡಿದ್ದ ಚನ್ನಗಿರಿ ಬಂದ್‌‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಸಂಘ ಪರಿವಾರ, ಕನ್ನಡಪರ, ದಲಿತ ಹಾಗೂ ರೈತ ಸಂಘಟನೆಗಳು ಒಗ್ಗೂಡಿ ಕರೆನೀಡಿದ್ದ ಬಂದ್‌ಗೆ ಪಟ್ಟಣದ ಜನರು ಸ್ಪಂದಿಸಿದರು. ಸ್ವಯಂ ಪ್ರೇರಿತವಾಗಿ ಅಂಗಡಿಗಳ ಬಾಗಿಲು ಮುಚ್ಚಿ ಸಹಕರಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸರ್ಕಾರಿ ಕಚೇರಿಗಳು ಮಾತ್ರ ಬಾಗಿಲು ತೆರೆದಿದ್ದವು. ಬಸ್‌ ಸಂಚಾರಕ್ಕೆ ತೊಂದರೆ ಆಗಲಿಲ್ಲ.

ವಿವಿಧ ಸಂಘಟನೆಗಳ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಆರೋಪಿಯ ಭಾವಚಿತ್ರ, ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಬೆಂಬಲಿಸಿದರು. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು, ತ್ವರಿತ ವಿಚಾರಣೆ ನಡೆಸಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ADVERTISEMENT
ಚನ್ನಗಿರಿ ಪಟ್ಟಣದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಜನ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.