ಚನ್ನಗಿರಿ: ತಾಲ್ಲೂಕಿನ ನಲ್ಲೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಜಯಂತಿ ನಗರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣ ಕೆಸರು ಗದ್ದೆಯಂತಾಗಿದೆ.
ಇಲ್ಲಿನ ಆವರಣ ಸಮತಟ್ಟಾಗಿ ಇಲ್ಲದ ಕಾರಣ ಮಳೆಗಾಲದಲ್ಲಿ ಮಳೆ ನೀರು ಅಲ್ಲಲ್ಲಿ ನಿಲ್ಲುತ್ತದೆ. ಶಾಲೆಗೆ ಬರುವ ವಿದ್ಯಾರ್ಥಿಗಳು ಈ ಕೆಸರಿನಲ್ಲಿಯೇ ಬರಬೇಕು. ಸಂಬಂಧಪಟ್ಟ ಇಲಾಖೆಯವರು ಶಾಲಾ ಆವರಣವನ್ನು ಸಮರ್ಪಕವಾಗಿ ಮಾಡುವ ಕಡೆ ಗಮನಹರಿಸಿಲ್ಲ. ಈಗಾಗಲೇ ಮುಂಗಾರು ಮಳೆ ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಹೆಚ್ಚಿನ ಮಳೆ ಬಿದ್ದರೆ ನೀರು ನಿಲ್ಲುತ್ತದೆ. ಶಾಲಾ ಆವರಣ ದುರಸ್ತಿಗೊಳಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕು.
ನೊಂದ ಗ್ರಾಮಸ್ಥರು, ಜಯಂತಿ ನಗರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.