ಪ್ರಾತಿನಿಧಿಕ ಚಿತ್ರ
ಚನ್ನಗಿರಿ: ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಸಂತಸ ಮೂಡಿದೆ.
ಕಳೆದ ಒಂದು ವಾರದಿಂದ ಮಳೆಯಾಗದೇ ರೈತರು ಮಳೆ ಬರಲಿ ಎಂದು ಕಾಯುವಂತಾಗಿತ್ತು. ಮೆಕ್ಕೆಜೋಳ ಬೆಳೆ ಕಾಳುಗಟ್ಟುವ ಹಂತದಲ್ಲಿ ಮಳೆಯ ಅವಶ್ಯಕತೆ ಇದ್ದು, ಈ ಮಳೆಯಿಂದಾಗಿ ಈ ಬಾರಿ ಉತ್ತಮ ಇಳುವರಿ ಬರುವ ನಿರೀಕ್ಷೆಯನ್ನು ರೈತರು ಹೊಂದಿದ್ದಾರೆ.
ಪಟ್ಟಣದಲ್ಲಿ ಅರ್ಧ ಗಂಟೆ ಬಿರುಸಿನ ಮಳೆ ಸುರಿಯಿತು. ಅಜ್ಜಿಹಳ್ಳಿ, ಸುಣಿಗೆರೆ, ಚಿಕ್ಕೂಲಿಕೆರೆ, ನಾರಶೆಟ್ಟಿಹಳ್ಳಿ, ಗರಗ, ಮಾಚನಾಯಕನಹಳ್ಳಿ, ದಿಗ್ಗೇನಹಳ್ಳಿ, ಹೊನ್ನೇಬಾಗಿ, ಮುದ್ದೇನಹಳ್ಳಿ ಮುಂತಾದ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.