ADVERTISEMENT

ಮುಖ್ಯಮಂತ್ರಿ ತೀರ್ಮಾನಕ್ಕೆ ಬದ್ಧ: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 16:27 IST
Last Updated 28 ಸೆಪ್ಟೆಂಬರ್ 2020, 16:27 IST
ಎಂ.ಪಿ. ರೇಣುಕಾಚಾರ್ಯ
ಎಂ.ಪಿ. ರೇಣುಕಾಚಾರ್ಯ   

ದಾವಣಗೆರೆ: ಸಚಿವ ಸಂಪುಟಕ್ಕೆ ಹೊಸದಾಗಿ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು, ಮುಖ್ಯಮಂತ್ರಿ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶಾಸಕ ಎಸ್.ಎ.ರವೀಂದ್ರನಾಥ್ ಮನೆಯಲ್ಲಿ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

‘ಮಧ್ಯಕರ್ನಾಟಕದ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ.ನಾನು ಪ್ರಬಲ ಆಕಾಂಕ್ಷಿಯಲ್ಲ. ರವೀಂದ್ರನಾಥ್‌ರಂಥ ಹಿರಿಯರು ಇದ್ದಾರೆ. ಜಿಲ್ಲೆಯ ಯಾರಿಗಾದರೂ ಕೊಡಲಿ’ ಎಂದ ಅವರು, ‘ಸಂಪುಟ ವಿಸ್ತರಣೆಗೆ ದಿನ ನಿಗದಿಯಾಗಿಲ್ಲ’ ಎಂದರು.

ADVERTISEMENT

ಕಾಂಗ್ರೆಸ್‌ಗೆ ದುಃಖ: ‘ರೈತರ ಹಿತದೃಷ್ಟಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಲಾಗುತ್ತಿದೆ. ರೈತರು ಸಂತೋಷವಾಗಿದ್ದಾರೆ. ಕಾಂಗ್ರೆಸ್‌ಗೆ ಸರ್ಕಾರದ ವಿರುದ್ಧ ಮಾತನಾಡಲು ಬೇರೆ ವಿಷಯವಿಲ್ಲ. ಹಾಗಾಗಿ ಅವರು ದುಃಖದಲ್ಲಿದ್ದಾರೆ. ಅದಕ್ಕಾಗಿ ರೈತರನ್ನು ಎತ್ತಿಕಟ್ಟುತ್ತಿದ್ದಾರೆ’ ಎಂದು ಆರೋಪಿಸಿದರು.

‘ಅಧಿವೇಶನದಲ್ಲಿ ಅಧಿಕೃತವಾಗಿ ಬಿಲ್‌ ಮಂಡನೆಯಾಗಿ ಪಾಸಾಗಿದೆ. ಒತ್ತಾಯ ಪೂರ್ವಕವಾಗಿ ನಾವು ಬಿಲ್ ಪಾಸ್ ಮಾಡಿಲ್ಲ. ಕಾಂಗ್ರೆಸ್ ಕಾರಣವಿಲ್ಲದೇ ಟೀಕೆ ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.