ADVERTISEMENT

ಹೊನ್ನಾಳಿ: 16ರಂದು ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 7:08 IST
Last Updated 7 ಅಕ್ಟೋಬರ್ 2021, 7:08 IST
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಗ್ರಾಮ ವಾಸ್ತವ್ಯಕ್ಕೆ ಬರುವಂತೆ ಮನವಿ ಸಲ್ಲಿಸಿದರು
ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಗ್ರಾಮ ವಾಸ್ತವ್ಯಕ್ಕೆ ಬರುವಂತೆ ಮನವಿ ಸಲ್ಲಿಸಿದರು   

ಹೊನ್ನಾಳಿ: ತಾಲ್ಲೂಕಿನ ಕುಂದೂರು ಹಾಗೂ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಯಲ್ಲಿ ಅ.16ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಕೈಗೊಳ್ಳಲಿ‌ದ್ದಾರೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಬುಧವಾರ ಬೆಂಗಳೂರಿನ ಮುಖ್ಯಮಂತ್ರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾಗೂ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಭೇಟಿ ಮಾಡಿ ಮಾತನಾಡಿದರು.

ಸರ್ಕಾರವೇ ಜನರ ಮನೆ ಬಾಗಿಲಿಗೆ ಬಂದು ಅವರ ಕುಂದುಕೊರತೆಗಳನ್ನು ಆಲಿಸುವ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ.‌ಈಗಾಗಲೇ ಅವಳಿ ತಾಲ್ಲೂಕಿನಲ್ಲಿ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ. ಈಗಲೂ ಮನೆ ಮನೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.