
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಚಿಕ್ಕಜಾಜೂರು: ಸಮೀಪದ ಅಂದನೂರು ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಹೀಟರ್ ಸ್ವಿಚ್ ತೆಗೆಯಲು ಹೋದ ಬಾಲಕ ನಾಗಾರ್ಜುನ (15) ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾನೆ.
ಬಾಲಕ ಕೊಡದಲ್ಲಿ ಬಿಸಿನೀರು ಕಾಯಿಸಲು ಹಾಕಲಾಗಿದ್ದ ವಿದ್ಯುತ್ ಹೀಟರ್ ಸ್ವಿಚ್ಚನ್ನು ತೆಗೆಯಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದೆ. ಬಾಲಕ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಾಗ, ಪೋಷಕರು ಚಿಕಿತ್ಸೆ ಕೊಡಿಸಲು ಹೊಳಲ್ಕೆರೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಬಾಲಕ ಸಿರಿಗೆರೆ ಸಮೀಪದ ಹಳುವುದರ ಗ್ರಾಮದ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ಎಂದು ತಿಳಿದುಬಂದಿದೆ.
ಚಿಕ್ಕಜಾಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.