
ಪ್ರಜಾವಾಣಿ ವಾರ್ತೆ
ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಪಟ್ಟಣದಲ್ಲಿ ಈಚೆಗೆ ಬೀದಿಬದಿಯ ಅಂಗಡಿಯಲ್ಲಿನ ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಆಸ್ಪತ್ರೆಯಲ್ಲಿ ಭಾನುವಾರ ಮೃತಪಟ್ಟಿದ್ದಾನೆ.
ಸ್ಥಳೀಯ ನೆಹರುನಗರ ಬಡಾವಣೆಯ ನಿವಾಸಿ ಇರ್ಫಾನ್ ಅವರ ಪುತ್ರ ಹಜರತ್ ಬಿಲಾಲ್ (6) ಮೃತ ಬಾಲಕ.
ಮಾರ್ಚ್ 13ರಂದು ಸಂಜೆ ರಂಜಾನ್ ಉಪವಾಸದ ನಂತರ ಜಾಮಿಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದ 19 ಮಕ್ಕಳು ಅಸ್ವಸ್ಥಗೊಂಡಿದ್ದರು. ಆ ಪೈಕಿ ಹಲವು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇನ್ನೂ ಕೆಲವು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.