ADVERTISEMENT

ಉಚ್ಚಂಗಿದುರ್ಗ: ಬಾಲ್ಯ ವಿವಾಹಕ್ಕೆ ತಡೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2021, 3:51 IST
Last Updated 26 ಜೂನ್ 2021, 3:51 IST
ನ್ಯಾಮತಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಯುವಕರು ಸಾಲುಗಟ್ಟಿ ನಿಂತಿದ್ದರು.
ನ್ಯಾಮತಿ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಆಯೋಜಿಸಿದ್ದ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಯುವಕರು ಸಾಲುಗಟ್ಟಿ ನಿಂತಿದ್ದರು.   

ಉಚ್ಚಂಗಿದುರ್ಗ: ಸಮೀಪದ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲ್ಯವಿವಾಹವನ್ನು ತಡೆಯುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಗ್ರಾಮವೊಂದರ ಬಾಲಕಿಯ ವಿವಾಹವನ್ನು ಅದೇ ಗ್ರಾಮದ ಯುವಕನೊಂದಿಗೆ ನಡೆಸಲು ಸಿದ್ಧತೆ ನಡೆದಿತ್ತು. ಈ ಕುರಿತು ಮಕ್ಕಳ ಸಹಾಯವಾಣಿಗೆ ಬಂದ ದೂರಿನ ಅನ್ವಯ ಕಾರ್ಯಪ್ರವೃತ್ತರಾದ ಅಧಿಕಾರಿಗಳು, ಮದುವೆ ಮನೆಗೆ ತೆರಳಿ ಬಾಲಕಿಯ ಶಾಲಾ ದಾಖಲೆಯನ್ನು ಪರಿಶೀಲಿಸಿದರು. ಈ ವೇಳೆ ಬಾಲಕಿಗೆ 17 ವರ್ಷ 4 ತಿಂಗಳು ಆಗಿರುವುದು ದೃಢಪಟ್ಟಿರುವುದರಿಂದ
ಮದುವೆ ನಿಲ್ಲಿಸಿದ್ದಾರೆ.

ಬಾಲ್ಯ ವಿವಾಹ ಮಾಡಿದರೆ ₹ 1 ಲಕ್ಷ ದಂಡ, ಒಂದು ವರ್ಷಕ್ಕೆ ಕಡಿಮೆಯಿಲ್ಲದಂತೆ ಎರಡು ವರ್ಷದವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯಾಗಲಿದೆ ಎಂದು ಪೋಷಕರಿಗೆ ಎಚ್ಚರಿಕೆ ನೀಡಿದರು. ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡರು.

ADVERTISEMENT

ಕಾರ್ಯಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರತ್ನಮ್ಮ, ಪೊಲೀಸ್ ಸಿಬ್ಬಂದಿ ಚಿದಾನಂದ, ಅಂಗನವಾಡಿ ಕಾರ್ಯಕರ್ತೆ ಬಸಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.