ADVERTISEMENT

ಇಲಾಖೆ ನಿಗದಿಪಡಿಸಿದ ಮಾರ್ಗಗಳಲ್ಲಿ ಮೆರವಣಿಗೆ

ಈದ್ ಮಿಲಾದ್, ಗಣಪತಿ ವಿಸರ್ಜನೆ ಮೆರವಣಿಗೆ ಮಾರ್ಗ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 15:43 IST
Last Updated 14 ಸೆಪ್ಟೆಂಬರ್ 2024, 15:43 IST
ಚನ್ನಗಿರಿ ಪಟ್ಟಣದಲ್ಲಿ  ಮೆರವಣಿಗೆ ಸಾಗುವ ಮಾರ್ಗಗಳನ್ನು ಶನಿವಾರ ಎಸ್‌ಪಿ ಉಮಾ ಪ್ರಶಾಂತ್ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು
ಚನ್ನಗಿರಿ ಪಟ್ಟಣದಲ್ಲಿ  ಮೆರವಣಿಗೆ ಸಾಗುವ ಮಾರ್ಗಗಳನ್ನು ಶನಿವಾರ ಎಸ್‌ಪಿ ಉಮಾ ಪ್ರಶಾಂತ್ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು    

ಚನ್ನಗಿರಿ: ‘ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ನಡೆಯಲಿದ್ದು, ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗಗಳಲ್ಲಿ ಮೆರವಣಿಗೆ ಸಾಗಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.

ಪಟ್ಟಣದ ವಿವಿಧ ಬೀದಿಗಳಲ್ಲಿ ಶುಕ್ರವಾರ ಮಾರ್ಗ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಈದ್ ಮಿಲಾದ್ ಹಬ್ಬ ಸೆ. 15ರಂದು ನಡೆಯಲಿದ್ದು, ಮುಸ್ಲಿಂ ಸಮುದಾಯದವರು ಈ ಸಂದರ್ಭದಲ್ಲಿ ಮೆರವಣಿಗೆ ನಡೆಸಲಿದ್ದಾರೆ. ಅದೇ ದಿನ ಹಿಂದೂ ಏಕತಾ ಗಣಪತಿ ಹಾಗೂ ಸೆ. 22ರಂದು ಬಜರಂಗ ದಳದ ಗಣಪತಿ ವಿಸರ್ಜನೆ ಅಂಗವಾಗಿ ಮೆರವಣಿಗೆ ನಡೆಯಲಿದೆ. ಎಲ್ಲ ಧರ್ಮದವರು ಶಾಂತಿ ಕಾಪಾಡಲು ಮುಂದಾಗಬೇಕಾಗಿದೆ. ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪ್ರಚೋದನಕಾರಿಯಾಗಿ ಭಾಷಣ ಮಾಡುವುದು ಬೇಡ. ಸಾರ್ವಜನಿಕರ ಶಾಂತಿಗೆ ಭಂಗ ಬಾರದಂತೆ ಮೆರವಣಿಗೆ ನಡೆಸಬೇಕು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ತುಂಬಾ ಅಗತ್ಯ’ ಎಂದು ಹೇಳಿದರು.

ADVERTISEMENT

ಡಿವೈಎಸ್‌ಪಿ ರುದ್ರಪ್ಪ ಎಸ್. ಉಜ್ಜನಕೊಪ್ಪ, ಪಿಎಸ್‌ಗಳಾದ ಸುರೇಶ್, ಸೈಫುದ್ಧೀನ್, ಗುರುಶಾಂತಪ್ಪ, ರೂಪ್ಲಿಬಾಯಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.