ADVERTISEMENT

ತ್ಯಾವಣಿಗೆ | ವಿಜೃಂಭಣೆಯ ಚೌಡೇಶ್ವರಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 2:21 IST
Last Updated 21 ಜನವರಿ 2026, 2:21 IST
ತ್ಯಾವಣಿಗೆ ಗ್ರಾಮದ ಚೌಡೇಶ್ವರಿ ದೇವಿಗೆ ಹರಕೆ ಹೊತ್ತ ಮಹಿಳೆಯರು ಮಡಲಕ್ಕಿ ನೀಡಿ ಭಕ್ತಿ ಸಮರ್ಪಿಸಿದರು.
ತ್ಯಾವಣಿಗೆ ಗ್ರಾಮದ ಚೌಡೇಶ್ವರಿ ದೇವಿಗೆ ಹರಕೆ ಹೊತ್ತ ಮಹಿಳೆಯರು ಮಡಲಕ್ಕಿ ನೀಡಿ ಭಕ್ತಿ ಸಮರ್ಪಿಸಿದರು.   

ತ್ಯಾವಣಿಗೆ: ಗ್ರಾಮದ ಹೊರ ವಲಯದಲ್ಲಿರುವ ಚೌಡೇಶ್ವರಿ ದೇವಿಯ ಜಾತ್ರೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಹರಕೆ ಹೊತ್ತ ಮಹಿಳೆಯರು ಮಡಲಕ್ಕಿ, ಬಳೆ, ವಸ್ತ್ರ, ಕಾಯಿ, ಹೂವು ಹಣ್ಣುನ್ನು ದೇವಸ್ಥಾನಕ್ಕೆ ಅರ್ಪಿಸಿದರು. ಜಾತ್ರೆಯ ಅಂಗವಾಗಿ ದೇವಿಗೆ ಅಭಿಷೇಕ, ಮಹಾಪೂಜೆ ನಡೆಯಿತು. ದೇವಸ್ಥಾನವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು.

ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜಾತ್ರೆ ನೇರವೇರಿತು. ದೇವಸ್ಥಾನದ ಆವರಣದಲ್ಲಿ ಬಣ್ಣ ಬಣ್ಣದ ರಂಗೋಲಿ ಬಿಡಸಲಾಗಿತ್ತು. ದೇವಸ್ಥಾನ ಕಮಟಿಯವರಿಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.