ಚಳ್ಳಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ನೌಕರರು ಮುಷ್ಕರ ನಡೆಸುತ್ತಿದ್ದ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ ಗುರುವಾರ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ಅಗತ್ಯ ಬೇಡಿಕೆಗಳನ್ನು ಈಡೇರಿಸಲು ಸಚಿವರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವುದಾಗಿ ಶಾಸಕರು ಭರವಸೆ ನೀಡಿದರು.
ಪೌರ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ನಗರಭೆ ಅಧ್ಯಕ್ಷೆ ಮಂಜುಳಾ ಆರ್.ಪ್ರಸನ್ನಕುಮಾರ್, ಉಪಾಧ್ಯಕ್ಷೆ ಕವಿತಾ ಬೋರಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ, ಸದಸ್ಯೆ ಸುಮಾ, ನಾಮನಿರ್ದೇಶಕ ಭದ್ರಿ, ಮುಖಂಡ ಕೃಷ್ಣಮೂರ್ತಿ, ಮಚ್ಚುಗುಂಟೆ ಪಾಲಯ್ಯ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.