
ಪ್ರಜಾವಾಣಿ ವಾರ್ತೆ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 5ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಮಧ್ಯಾಹ್ನ 12.15ಕ್ಕೆ ಹೆಲಿಕಾಪ್ಟರ್ ಮೂಲಕ ನಗರದ ಎಂ.ಬಿ.ಎ ಗ್ರೌಂಡ್‌ನ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ. ನಂತರ 12.30ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ನಂತರ ಶಿರಮಗೊಂಡನಹಳ್ಳಿಯ ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.