ಸಾವು
(ಸಾಂದರ್ಭಿಕ ಚಿತ್ರ)
ಚನ್ನಗಿರಿ: ತಾಲ್ಲೂಕಿನ ನುಗ್ಗಿಹಳ್ಳಿ ಗ್ರಾಮದ ಬಳಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಶುಕ್ರವಾರ ಮೃತಪಟ್ಟಿದ್ದಾರೆ.
ದೇವರಹಳ್ಳಿ ಗ್ರಾಮದ ಕೇಶವಮೂರ್ತಿ (65) ಮೃತಪಟ್ಟವರು. ಅವರು ಜುಲೈ 25ರಂದು ಸಂತೇಬೆನ್ನೂರಿನಿಂದ ದೇವರಹಳ್ಳಿ ಗ್ರಾಮಕ್ಕೆ ಬೈಕ್‌ನಲ್ಲಿ ಬರುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.