ADVERTISEMENT

ವೈದ್ಯರ ಮೇಲಿನ ಹಲ್ಲೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2019, 10:14 IST
Last Updated 15 ಜೂನ್ 2019, 10:14 IST
ಪಶ್ಚಿಮ ಬಂಗಾಳದಲ್ಲಿನ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದಾವಣಗೆರೆಯ ವಿದ್ಯಾರ್ಥಿಭವನ ವೃತ್ತದಲ್ಲಿ ಶುಕ್ರವಾರ ಯುವ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು
ಪಶ್ಚಿಮ ಬಂಗಾಳದಲ್ಲಿನ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದಾವಣಗೆರೆಯ ವಿದ್ಯಾರ್ಥಿಭವನ ವೃತ್ತದಲ್ಲಿ ಶುಕ್ರವಾರ ಯುವ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಿದರು   

ದಾವಣಗೆರೆ: ಕೋಲ್ಕತ್ತದ ಎನ್‌ಆರ್‌ಎಸ್‌ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ಯುವ ವೈದ್ಯೆ ಡಾ. ಪ್ರತಿಭಾ ಮುಖರ್ಜಿ ಮೇಲಿನ ಹಲ್ಲೆ ಖಂಡಿಸಿ ನಗರದಲ್ಲಿ ಶುಕ್ರವಾರ ಜೆಜೆಎಂ ವೈದ್ಯಕೀಯ ಕಾಲೇಜಿನ ಜೂನಿಯರ್‌ ಡಾಕ್ಟರ್ಸ್ ಅಸೋಸಿಯೇಷನ್‌, ಜೆಜೆಎಂ ಸ್ಟೂಡೆಂಟ್ ಯೂನಿಯನ್‌, ಜೆಡಿಎ, ಐಎಂಎ ಹಾಗೂ ಮೆಡಿಕಲ್ ಸರ್ವಿಸ್ ಸೆಂಟರ್‌ನಿಂದ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಜೆಜೆಎಂ ವೈದ್ಯಕೀಯ ಕಾಲೇಜಿನಿಂದ ‘ಭಯೋತ್ಪಾದಕರಲ್ಲ, ವೈದ್ಯರು’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದ ವೈದ್ಯರು ವಿದ್ಯಾರ್ಥಿಭವನ, ಗುಂಡಿ ಸರ್ಕಲ್‌, ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಮಾಯಿಸಿದರು.

ವೈದ್ಯರ ಮೇಲೆ ಪದೇ ಪದೇ ಹಲ್ಲೆಯಾಗುತ್ತಿದ್ದು, ವೈದ್ಯರಿಗೆ ರಕ್ಷಣೆ ನೀಡಬೇಕು. ಹಲ್ಲೆ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಎಸ್‌.ಬಿ. ಮುರುಗೇಶ್‌, ಜೆಜೆಎಂ ಸ್ಟೂಡೆಂಟ್ ಯೂನಿಯನ್‌ ಪ್ರಧಾನ ಕಾರ್ಯದರ್ಶಿ ಮೀರ್‌ ಲುಕ್ಮಾನ್‌ ಮೆಹದಿ, ಜೂನಿಯರ್‌ ಡಾಕ್ಟರ್ಸ್‌ ಅಸೋಸಿಯೇಷನ್‌ನ ಅಧ್ಯಕ್ಷ ಡಾ. ಪ್ರತ್ಯಕ್ಷ್‌ ವೈಷ್ಣ, ಮೆಡಿಕಲ್‌ ಸರ್ವಿಸ್‌ ಸೆಂಟರ್‌ ದಾವಣಗೆರೆ ಶಾಖೆಯ ಡಾ. ವಸುಧೇಂದ್ರ ಎನ್‌. ಸೇರಿ ಯುವ ವೈದ್ಯರು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.