ಪ್ರಜಾವಾಣಿ ವಾರ್ತೆ
ಸಂತೇಬೆನ್ನೂರು: ಭಾವಗೀತೆಗಳ ಕವಿ ಎಂದೇ ಪ್ರಸಿದ್ಧರಾಗಿದ್ದ ಎಚ್.ಎಸ್.ವೆಂಕಟೇಶ ಮೂರ್ತಿ ಅವರ ನಿಧನದಿಂದ ಸಾರಸ್ವತ ಲೋಕದ ಮೇರು ಪ್ರತಿಭೆಯನ್ನು ಕಳೆದುಕೊಂಡಂತಾಗಿದೆ ಎಂದು ಇತಿಹಾಸ ಸಂಶೋಧಕ ಸುಮತೀಂದ್ರ ನಾಡಿಗ್ ಹೇಳಿದರು.
ಇಲ್ಲಿನ ವಿಜಯ ಯುವಕ ಸಂಘದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಅವರು ಮಾತನಾಡಿದರು.
‘ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಕ್ಷೇತ್ರಗಳಲ್ಲಿ ಅವಿಸ್ಮರಣೀಯ ಕೊಡುಗೆ ನೀಡಿರುವ ಅವರು ಚಲನಚಿತ್ರ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದಾರೆ’ ಎಂದು ಸ್ಮರಿಸಿದರು.
ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಮೌನಾಚರಣೆ ಮಾಡಿ ಗೌರವ ಸಮರ್ಪಿಸಿದರು. ಕಸಾಪ ಜಿಲ್ಲಾ ಘಟಕದ ಸಹ ಕಾರ್ಯದರ್ಶಿ ಕೆ.ಎಸ್.ವೀರೇಶ್ ಪ್ರಸಾದ್, ಮುಖ್ಯ ಶಿಕ್ಷಕರಾದ ಕೆ.ಸಿ.ನಾಗರಾಜ್, ಕುಬೇರಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.