ADVERTISEMENT

ಚನ್ನಗಿರಿಯಲ್ಲಿ ಕಾಂಗ್ರೆಸ್ ಮುಖಂಡನ ಶವ ಪತ್ತೆ: ಕೊಲೆ ಶಂಕೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 8:52 IST
Last Updated 10 ಸೆಪ್ಟೆಂಬರ್ 2021, 8:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಚನ್ನಗಿರಿ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಪತ್ತೆಯಾಗಿದೆ. ಕೊಲೆ ಮಾಡಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.

ಜೈನುಲ್ಲಾಖಾನ್ (40) ಮೃತಪಟ್ಟವರು. ಅವರು ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಬಸವಾಪಟ್ಟಣದ ಗುಡ್ಡದಲ್ಲಿ ಇದೀಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿದ್ದ ಅವರು ಬೆಸ್ಕಾಂ ಗುತ್ತಿಗೆದಾರರಾಗಿಯು ಕೆಲಸ ಮಾಡುತ್ತಿದ್ದರು.

ADVERTISEMENT

ಸ್ಥಳ ಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.