ADVERTISEMENT

ದಾವಣಗೆರೆ | ‘ಉದ್ಯೋಗದ ಸಂಖ್ಯೆ ತೋರಿಸಲು ಅಗ್ನಿಪಥ’

​ಪ್ರಜಾವಾಣಿ ವಾರ್ತೆ
Published 28 ಜೂನ್ 2022, 4:32 IST
Last Updated 28 ಜೂನ್ 2022, 4:32 IST
ಅಗ್ನಿಪಥ ಯೋಜನೆ ವಿರೋಧಿಸಿ ಹೊನ್ನಾಳಿ ತಾಲ್ಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿದರು
ಅಗ್ನಿಪಥ ಯೋಜನೆ ವಿರೋಧಿಸಿ ಹೊನ್ನಾಳಿ ತಾಲ್ಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿದರು   

ಹೊನ್ನಾಳಿ: ‘ಅಗ್ನಿಪಥ’ ಯೋಜನೆಯನ್ನು ವಿರೋಧಿಸಿ ಸೋಮವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರದ ಬಿಜೆಪಿ ಸರ್ಕಾರ, ಯುವಕರ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದರಲ್ಲಿ ಎಡವಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಆರೋಪಿಸಿದರು.

ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಪ್ರತಿವರ್ಷ ₹ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿತ್ತು. ಅದು ಆಗದ ಕಾರಣ ಉದ್ಯೋಗಿಗಳ ಸಂಖ್ಯೆಯನ್ನು ತೋರಿಸಲು ಅಗ್ನಿಪ‍ಥ ತರುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ದೂರಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಆರ್. ನಾಗಪ್ಪ, ಸಾಸ್ವೆಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ. ಗದ್ದಿಗೇಶ್, ಮುಖಂಡರಾದ ಕೆಂಗಲಹಳ್ಳಿ ಗಿರೀಶ್, ಸಾಸ್ವೇಹಳ್ಳಿ ಸುಲೇಮಾನ್ ಖಾನ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಧುಗೌಡ, ದಿಡಗೂರು ಪ್ರಕಾಶ್, ಕ್ಯಾಸಿನೆಕರೆ ಶೇಖರಪ್ಪ ಮಾತನಾಡಿದರು.

ಪುರಸಭಾ ಸದಸ್ಯ ಮೈಲಪ್ಪ, ರಾಜೇಂದ್ರ,ಮಾಜಿ ಸದಸ್ಯ ಎಚ್.ಬಿ. ಅಣ್ಣಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವಿಜಯಕುಮಾರ್, ಮಲ್ಲೇಶಪ್ಪ, ಎಸ್.ಎಸ್. ಬೀರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.