
ಬಸವರಾಜು ಶಿವಗಂಗಾ
ದಾವಣಗೆರೆ: ‘ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಆದ್ಯತೆ ನೀಡಲಿ. ಒಂದು ವೇಳೆ ಬದಲಾವಣೆ ಬಯಸುವುದಾದರೆ ನನ್ನ ಹಿರಿಯ ಸಹೋದರನಿಗೆ (ಶಿವಗಂಗಾ ಶ್ರೀನಿವಾಸ) ಟಿಕೆಟ್ ನೀಡಲಿ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಹೇಳಿದರು.
‘ಶಾಸಕರು ಮೃತಪಟ್ಟಾಗ ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಸಂಪ್ರದಾಯ ಕಾಂಗ್ರೆಸ್‌ನಲ್ಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅನ್ನು ಶಾಮನೂರು ಕುಟುಂಬಕ್ಕೆ ನೀಡಬೇಕಾಗುತ್ತದೆ. ಈ ಕಾರಣಕ್ಕೆ ಅವರ ಕುಟುಂಬಕ್ಕೆ ಆದ್ಯತೆ ದೊರೆಯಲಿ’ ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಹೈಕಮಾಂಡ್ ಘೋಷಿಸಿದ ಅಭ್ಯರ್ಥಿಯ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಾಂಗ್ರೆಸ್‌ನಿಂದ ನನ್ನ ಸಹೋದರ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಿದರೆ ತಪ್ಪಿಲ್ಲ. ಅವರಿಗೆ ಟಿಕೆಟ್ ನೀಡಿದರೆ ಖಂಡಿತಾ ನಾನೇ ಚುನಾವಣೆಯನ್ನು ಮುನ್ನಡೆಸುತ್ತೇನೆ’ ಎಂದು ಹೇಳಿದರು.
‘ಬಳ್ಳಾರಿಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತ ಮೃತಪಟ್ಟ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಲಿ. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಲಿ. ಯಾರು ಸಹ ಇಂತಹ ವಿಚಾರದಲ್ಲಿ ರಾಜಕಾರಣ ಮಾಡಬಾರದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.