ADVERTISEMENT

ಮಲೇಬೆನ್ನೂರು ಪುರಸಭೆ ಕಾಂಗ್ರೆಸ್‌ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 4:47 IST
Last Updated 30 ಡಿಸೆಂಬರ್ 2021, 4:47 IST
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪುರಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ವಿಜಯೋತ್ಸವ ಆಚರಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪುರಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವುದರಿಂದ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ವಿಜಯೋತ್ಸವ ಆಚರಿಸಿದರು.   

ಮಲೇಬೆನ್ನೂರು (ದಾವಣಗೆರೆ ಜಿಲ್ಲೆ): ಮಲೇಬೆನ್ನೂರು ಪುರಸಭೆಗೆ ನಡೆದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಲಭಿಸಿದೆ. ಕಳೆದ ಬಾರಿ ಅತಂತ್ರ ಫಲಿತಾಂಶ ಹೊರಬಂದಿದ್ದರಿಂದ ಬಿಜೆಪಿ–ಜೆಡಿಎಸ್‌ ಮೈತ್ರಿಯೊಂದಿಗೆ ಅಧಿಕಾರ ನಡೆಸಿತ್ತು.

ಒಟ್ಟು 23 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ 12 ಅಭ್ಯರ್ಥಿಗಳು (ಇಬ್ಬರು ಅವಿರೋಧ ಸೇರಿ), ಬಿಜೆಪಿಯ 7, ಜೆಡಿಎಸ್‌ನ 3 ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ.

ಹಿಂದಿನ ಅವಧಿಯಲ್ಲಿ ಕಾಂಗ್ರೆಸ್‌ನ 8, ಬಿಜೆಪಿಯ 7, ಜೆಡಿಎಸ್‌ನ 5 ಹಾಗೂ ಐವರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಲ್ಕು ಹೆಚ್ಚುವರಿ ಸ್ಥಾನಗಳನ್ನು ಗೆದ್ದುಕೊಂಡಿದ್ದು, ಪುರಸಭೆಯ ಗದ್ದುಗೆಯನ್ನು ಏರಲಿದೆ. ಬಿಜೆಪಿ ಕಳೆದ ಬಾರಿಯಷ್ಟೇ ಸ್ಥಾನಗಳನ್ನು ಪಡೆದಿದೆ. ಜೆಡಿಎಸ್‌ ಎರಡು ಸ್ಥಾನಗಳನ್ನು ಕಳೆದುಕೊಂಡಿದೆ. ಮೂವರು ಪಕ್ಷೇತರರ ಬದಲು ಈ ಬಾರಿ ಕೇವಲ ಒಬ್ಬ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.