ADVERTISEMENT

ಶಾಸಕ ಹರೀಶ್ ನಾಪತ್ತೆ: ಪೋಸ್ಟರ್ ಅಂಟಿಸಿದ ಕಾಂಗ್ರೆಸ್ಸಿಗರು

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2025, 8:02 IST
Last Updated 7 ನವೆಂಬರ್ 2025, 8:02 IST
ಶಾಸಕ ಬಿ.ಪಿ. ಹರೀಶ್ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹರಿಹರದ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿದರು.
ಶಾಸಕ ಬಿ.ಪಿ. ಹರೀಶ್ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹರಿಹರದ ಬಸ್ ನಿಲ್ದಾಣದಲ್ಲಿ ಪೋಸ್ಟರ್ ಅಂಟಿಸಿದರು.   

ಹರಿಹರ: ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲಿ ಶಾಸಕರು ಕಾಣೆಯಾಗಿದ್ದಾರೆ, ಹುಡುಕಿ ಕೊಡಿ ಎಂಬ ಪೋಸ್ಟರ್ ಗಳನ್ನು ಅಂಟಿಸಿ ಗಮನ ಸೆಳೆದರು.

‘ಕಳೆದ ಹಲವು ದಿನಗಳಿಂದ ಶಾಸಕ ಹರೀಶ್ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತ್ರ ಪೇಪರ್ ಹುಲಿಯಂತೆ ಬಂದು ನಾಪತ್ತೆಯಾಗುತ್ತಿದ್ದಾರೆ’ ಎಂದು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಎಸ್.ಕೆ. ಆರೋಪಿಸಿದರು.

‘ಶಾಸಕರು ಎಲ್ಲೇ ಇದ್ದರೂ ಕೂಡಲೆ ಕ್ಷೇತ್ರಕ್ಕೆ ಮರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಅಥವಾ ಸೇವೆ ಮಾಡಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ ಅವರು, ಹರೀಶ್ ಅವರು ಎಲ್ಲೇ ಕಂಡರು ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇವೆ’ ಎಂದರು.

ADVERTISEMENT

‘ಅವರನ್ನು ಗೆಲ್ಲಿಸಿದ ನಂತರವೂ ದಾವಣಗೆರೆ ನಗರದಲ್ಲೇ ವಾಸಿಸುತ್ತಿದ್ದಾರೆ. ಅಮಾವಾಸ್ಯೆ–ಹುಣ್ಣಿಮೆಯಂತೆ ಅಪರೂಪವಾಗಿಯೂ ಶಾಸಕರು ಕ್ಷೇತ್ರದ ಜನರ ಸಂಪರ್ಕಕ್ಕೆ ಸಿಗುತ್ತಿಲ್ಲ. ಜನರಿಗೆ ಶಾಸಕರನ್ನು ಸಂಪರ್ಕಿಸಲು ಕಷ್ಟವಾಗುತ್ತಿದ್ದು, ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ’ ಎಂದು ದೂರಿದರು.

‘ಶಾಸಕರಾದ ನಂತರ ವಿರೋಧ ಪಕ್ಷದ ನಾಯಕರನ್ನು ಟೀಕಿಸುವುದೇ ಅವರ ದೊಡ್ಡ ಸಾಧನೆಯಾಗಿದೆ, ಇದಲ್ಲದೆ ಶಾಸಕರು ಸ್ವಪಕ್ಷದ ಆಂತರಿಕ ಕಲಹಗಳಲ್ಲಿ ಮುಳುಗಿ ಜನರ ವಿಶ್ವಾಸಕ್ಕೆ ಧಕ್ಕೆ ತಂದಿದ್ದಾರೆ’ ಎಂದು ಟೀಕಿಸಿದರು.

ಈ ವೇಳೆ ತಾಲ್ಲೂಕು ಯುವ ಕಾಂಗ್ರೆಸ್ ಮುಖಂಡರಾದ ಶಿವಾಜಿ, ಶ್ರೀನಿಧಿ, ಹರೀಶ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.