ADVERTISEMENT

ಬೇಟೆಗೆ ಸಂಚು: ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 5:05 IST
Last Updated 30 ಜುಲೈ 2022, 5:05 IST
ಜಗಳೂರು ತಾಲ್ಲೂಕಿನ ಮರೇನಹಳ್ಳಿಯ ಬಳಿ ವನ್ಯಜೀವಿಗಳ ಬೇಟೆಗೆ ಸಂಚು ಹೂಡಿದ್ದ ಆರೋಪಿಯನ್ನು  ಅರಣ್ಯಾಧಿಕಾರಿಗಳು ಬಂಧಿಸಿರುವುದು.
ಜಗಳೂರು ತಾಲ್ಲೂಕಿನ ಮರೇನಹಳ್ಳಿಯ ಬಳಿ ವನ್ಯಜೀವಿಗಳ ಬೇಟೆಗೆ ಸಂಚು ಹೂಡಿದ್ದ ಆರೋಪಿಯನ್ನು  ಅರಣ್ಯಾಧಿಕಾರಿಗಳು ಬಂಧಿಸಿರುವುದು.   

ದಾವಣಗೆರೆ: ಜಗಳೂರು ತಾಲ್ಲೂಕಿನ ಮರೇನಹಳ್ಳಿ ಬಳಿಯ ಜಮೀನೊಂದರಲ್ಲಿ ವನ್ಯ ಜೀವಿ ಬೇಟೆಯಾಡಲು ಸಂಚು ರೂಪಿಸಿದ್ದ ಆರೋಪದ ಮೇರೆಗೆ ಒಬ್ಬನನ್ನು ಜಗಳೂರು ವಲಯ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಬಂಧಿಸಿದ್ದಾರೆ.

ಜಗಳೂರು ತಾಲ್ಲೂಕಿನ ಬಸವೇಶ್ವರ ಬಡಾವಣೆಯ ಹನುಮಂತ ಬಂಧಿತ. ಈತನಿಂದ 3 ಬಲೆ, 1 ಬೈಕ್, 1 ಸುತ್ತಿಗೆ, 1 ಕುಡುಗೋಲು ಹಾಗೂ ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ದಾವಣಗೆರೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಭರಮಸಾಗರದ ನಿವಾಸಿ ಕುಮಾರ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿಸಿದ್ದಾರೆ.

ADVERTISEMENT

‘ಹನುಮಂತನ ವಿರುದ್ಧ ವನ್ಯಜೀವಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮತ್ತೊಬ್ಬ ಆರೋಪಿ ಭರಮಸಾಗರದ ನಿವಾಸಿ ಕುಮಾರ ನಾಪತ್ತೆಯಾಗಿದ್ದು. ಶೋಧ ಕಾರ್ಯ ಮುಂದುವರಿಸಲಾಗಿದೆ’ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ದಾವಣಗೆರೆ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ತಾಂತ್ರಿಕ ಸಹಾಯಕರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.