ADVERTISEMENT

ದಾವಣಗೆರೆ: ನಕಲು ಮಾಡಲು ಸಹಕಾರ: ಶಿಸ್ತು ಕ್ರಮಕ್ಕೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 3 ಜುಲೈ 2020, 3:39 IST
Last Updated 3 ಜುಲೈ 2020, 3:39 IST

ದಾವಣಗೆರೆ: ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಪರೀಕ್ಷೆ ನಡೆಯುತ್ತಿದ್ದ ವೇಳೆ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸುತ್ತಿದ್ದ ಆರೋಪದಲ್ಲಿ ಒಬ್ಬ ಶಿಕ್ಷಕ ಮತ್ತು ಅಟೆಂಡರ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

ತಾಲ್ಲೂಕಿನ ಆಲೂರು ಗೊಲ್ಲರಹಟ್ಟಿಯ ಕನ್ನಡ ಶಿಕ್ಷಕ ನಂದಿಬಸಪ್ಪ ಮತ್ತು ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆಯ ಲ್ಯಾಬ್ ಅಟೆಂಡರ್ ಶಿವಮೂರ್ತಿ ಪರೀಕ್ಷಾ ಕೇಂದ್ರದಲ್ಲಿ ಸಿದ್ಧಪಡಿಸಿದ ಉತ್ತರ ಪತ್ರಿಕೆಗಳನ್ನು ಇಟ್ಟುಕೊಂಡಿರುವುದು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವೀರಣ್ಣ ಜತ್ತಿ ಪರಿವೀಕ್ಷಣೆಗೆ ತೆರಳಿದ ಸಂದರ್ಭ ಕಂಡು ಬಂದಿದೆ ಎಂದು ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT