ADVERTISEMENT

ಸಹಕಾರದಿಂದಲೇ ದೇಶದ ಸಮೃದ್ಧಿ

ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ವಿಶೇಷ ತರಬೇತಿ ಶಿಬಿರ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 3:17 IST
Last Updated 20 ಜನವರಿ 2026, 3:17 IST
ಚನ್ನಗಿರಿಯ ಟಿ.ಎ.ಪಿ.ಸಿ.ಎಂ.ಸಿ ಸಭಾಂಗಣದಲ್ಲಿ ಸೋಮವಾರ ನಡೆದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮ
ಚನ್ನಗಿರಿಯ ಟಿ.ಎ.ಪಿ.ಸಿ.ಎಂ.ಸಿ ಸಭಾಂಗಣದಲ್ಲಿ ಸೋಮವಾರ ನಡೆದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮ   

ಚನ್ನಗಿರಿ: ‘ಸಹಕಾರ ಸಂಘಗಳು ಸಮುದ್ರ ಇದ್ದಂತೆ. ಇಲ್ಲಿ ಲೆಕ್ಕ ಪತ್ರಗಳ ನಿರ್ವಹಣೆ ತುಂಬಾ ಅಗತ್ಯವಾಗಿ ಆಗಬೇಕಾಗಿದೆ’ ಎಂದು ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಬಸಪ್ಪ ತಿಳಿಸಿದರು.

ಪಟ್ಟಣದ ಟಿ.ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ ಹಾಗೂ ಶಿವಮೊಗ್ಗ,ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ನಡೆದ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ಒಂದು ದಿನದ ವಿಶೇಷ ತರಬೇತಿ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲ ಸಹಕಾರ ಸಂಘಗಳಿಗಿಂತ ಹಾಲು ಉತ್ಪಾದಕರ ಸಹಕಾರ ಸಂಘಗಳು ವಿಭಿನ್ನವಾಗಿರುತ್ತದೆ. ಆಯಾ ಸಂಘಗಳು ಪ್ರತಿ ದಿನ ಲೆಕ್ಕ ಪತ್ರಗಳ ನಿರ್ವಹಣೆಯನ್ನು ಕಡ್ಡಾಯವಾಗಿ ಮಾಡಬೇಕು. ಯಾವ ಸಂಘದಲ್ಲಿ ಲೆಕ್ಕ ಪತ್ರಗಳ ನಿರ್ವಹಣೆ ಸರಿಯಾಗಿರುತ್ತದೆಯೋ ಅಂತಹ ಸಂಘ ಉತ್ತಮ ಪ್ರಗತಿಯನ್ನು ಕಾಣಲು ಸಾಧ್ಯವಾಗುತ್ತದೆ ಎಂದರು.

ADVERTISEMENT

ಸಹಕಾರದಿಂದಲೇ ದೇಶದ ಸಮೃದ್ಧಿ. ರೈತರು ಅಭಿವೃದ್ಧಿಯಾದರೆ ದೇಶವು ಪ್ರಗತಿಯನ್ನು ಕಾಣಲು ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರ ರೈತರಿಗೆ ರಸಗೊಬ್ಬರ, ಬೀಜ, ಕೀಟನಾಶಕ ಸೌಕರ್ಯವನ್ನು ನೀಡಿ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ನೀಡುವ ಮೂಲಕ ಪ್ರೋತ್ಸಾಹಿಸುತ್ತಾ ಬಂದಿದೆ. ಸಹಕಾರ ಸಂಘಗಳಲ್ಲಿ ರೈತರಿಗೆ ₹ 3 ಲಕ್ಷ ಬಡ್ಡಿ ರಹಿತ ಸಾಲವನ್ನು ನೀಡುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಸಹಕಾರ ಸಂಘಗಳನ್ನು ತೆರೆದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಸಹಕಾರ ರತ್ನ ಪುರಸ್ಕೃತ ಜೆ.ಆರ್. ಷಣ್ಮುಖಪ್ಪ ಹೇಳಿದರು.

ಶಿ.ದಾ.ಚಿ ನಿರ್ದೇಶಕರಾದ ಬಿ.ಜಿ. ಬಸವರಾಜಪ್ಪ, ಕೆ.ಜಿ. ಸುರೇಶ್, ಎಸ್.ಜಿ. ಸತೀಶ್, ಉಪ ವ್ಯವಸ್ಥಾಪಕ ಡಾ.ಕೆ.ಪಿ. ಸಂಜಯ್, ವಿಸ್ತರಣಾಧಿಕಾರಿ ಕೆ. ಕರಿಯಮ್ಮ, ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಆರ್. ಸಂಜೀವ್ ಕುಮಾರ್, ಶಿವಾನಂದ್, ಶೇಖರಪ್ಪ, ಕೆ.ಎಂ. ಜಗದೀಶ್, ಕೆ.ಎಚ್. ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಸಹಕಾರ ಒಕ್ಕೂಟ ನಿಯಮಿತ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.