ADVERTISEMENT

ದಾವಣಗೆರೆ: ಕಾರ್ಪೊರೇಟ್‌ ಕಂಪನಿಗಳ ವಿರುದ್ಧ ಪ್ರತಿಭಟನೆ

ಕೃಷಿ ಕ್ಷೇತ್ರಕ್ಕೆ ಮುಕ್ತ ಅವಕಾಶ ಕಲ್ಪಿಸಿರುವ ಕೇಂದ್ರ ಸರ್ಕಾರದ ನೀತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2025, 6:55 IST
Last Updated 14 ಆಗಸ್ಟ್ 2025, 6:55 IST
<div class="paragraphs"><p>‘ಬಹುರಾಷ್ಟ್ರೀಯ ಕಂಪನಿಗಳೇ ಭಾರತ ಬಿಟ್ಟು ತೊಲಗಿ’ ಎಂದು ಆಗ್ರಹಿಸಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು </p></div>

‘ಬಹುರಾಷ್ಟ್ರೀಯ ಕಂಪನಿಗಳೇ ಭಾರತ ಬಿಟ್ಟು ತೊಲಗಿ’ ಎಂದು ಆಗ್ರಹಿಸಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು

   

–ಪ್ರಜಾವಾಣಿ ಚಿತ್ರ

ದಾವಣಗೆರೆ: ದೇಶದ ನೈಸರ್ಗಿಕ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ವಿದೇಶಿ ಕಾರ್ಪೊರೇಟ್‌ ಕಂಪನಿಗಳು ದೇಶ ಬಿಟ್ಟು ತೊಲಗಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಕೇಂದ್ರೀಯ ಕಾರ್ಮಿಕ ಸಂಘಗಳ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ADVERTISEMENT

‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಚಳವಳಿಯ ನೆನಪಿಗಾಗಿ ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು, ಕಾರ್ಪೊರೇಟ್ ಕಂಪನಿಗಳ ವಿರುದ್ಧ ಘೋಷಣೆ ಕೂಗಿದರು. ಅಲ್ಲಿಂದ ಮೆರವಣಿಗೆ ಹೊರಟು ಉಪವಿಭಾಗಾಧಿಕಾರಿ ಕಚೇರಿ ತಲುಪಿ ಮನವಿ ಪತ್ರ ಸಲ್ಲಿಸಿದರು.

‘ಸ್ವಾತಂತ್ರ್ಯ ಹೋರಾಟದಲ್ಲಿ ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಪ್ರಮುಖ ಚಳವಳಿ. 1942ರಲ್ಲಿ ನಡೆದ ಈ ಹೋರಾಟ ಐತಿಹಾಸಿಕ ಮಹತ್ವ ಪಡೆದುಕೊಂಡಿದೆ. ಸ್ವಾತಂತ್ರ್ಯಾನಂತರದಲ್ಲಿ ಕಾರ್ಪೊರೇಟ್‌ ಕಂಪನಿಗಳು ಜನರನ್ನು ಶೋಷಣೆ ಮಾಡುತ್ತಿವೆ. ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕಾರ್ಪೊರೇಟ್‌ ಕಂಪನಿಗಳ ಪರವಾದ ನೀತಿ ಅನುಷ್ಠಾನಕ್ಕೆ ಬರುತ್ತಿದೆ’ ಎಂದು ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ಮುಖಂಡ ಎಚ್.ಜಿ. ಉಮೇಶ್ ಆರೋಪಿಸಿದರು.

‘ಕೃಷಿ ವಲಯ ಪ್ರವೇಶಕ್ಕೆ ಬಹುರಾಷ್ಟ್ರೀಯ ಕಂಪನಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇದು ದೇಶದ ರೈತರ ಮೇಲೆ ಬಹುದೊಡ್ಡ ಪರಿಣಾಮವನ್ನುಂಟು ಮಾಡಲಿದೆ. ಭಾರತದ ಉತ್ಪನ್ನಗಳಿಗೆ ಅಮೆರಿಕ ಹೆಚ್ಚು ಸುಂಕ ವಿಧಿಸುವ ಬೆದರಿಕೆ ಹಾಕುತ್ತಿದೆ. ಈ ಬೆದರಿಕೆಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ಎದುರಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಸುರೇಶ್ ಎರಗುಂಟೆ, ಮಧು ತೋಗಲೇರೆ, ಈ. ಉಮೇಶ್, ಆವರಗೆರೆ ಚಂದ್ರು, ಆನಂದರಾಜ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.