ADVERTISEMENT

ಲಾಕ್‌ಡೌನ್‌: ಅನಗತ್ಯವಾಗಿ ಸಂಚರಿಸಿದವರಿಗೆ ದಂಡ

​ಪ್ರಜಾವಾಣಿ ವಾರ್ತೆ
Published 10 ಮೇ 2021, 8:02 IST
Last Updated 10 ಮೇ 2021, 8:02 IST
   

ದಾವಣಗೆರೆ: ರಾಜ್ಯ ಸರ್ಕಾರ ಘೋಷಿಸಿರುವ 14 ದಿನಗಳ ಲಾಕ್‌ಡೌನ್‌ಇಂದಿನಿಂದ ಆರಂಭವಾಗಿದೆ.ಸೋಮವಾರ ಪೊಲೀಸರು ರಸ್ತೆಗಿಳಿದಿದ್ದು,ಸೂಕ್ತ ದಾಖಲೆಗಳನ್ನು ತೋರಿಸದ ವಾಹನಗಳನ್ನು ವಶಕ್ಕೆ ಪಡೆದುಕೊಂಡರು.

ನಗರದ ಜಯದೇವ ಸರ್ಕಲ್, ಗುಂಡಿ ಸರ್ಕಲ್, ಅಂಬೇಡ್ಕರ್ ವೃತ್ತ, ಗಾಂಧಿ ಸರ್ಕಲ್ ಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಅನಗತ್ಯವಾಗಿ ಸಂಚರಿಸುವವರಿಗೆ ತಡೆಯೊಡ್ಡಿದರು.

ಜಿಲ್ಲಾ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದ್ದು, ಆಂಬುಲೆನ್ಸ್, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ADVERTISEMENT

ರಸ್ತೆಗಿಳಿದ ತಹಶೀಲ್ದಾರ್
ದಾವಣಗೆರೆ ತಾಲ್ಲೂಕು ತಹಶಿಲ್ದಾರ್ ಬಿ.ಎನ್. ಗಿರೀಶ್ ಅವರು ರಸ್ತೆಗೆ ಇಳಿದಿದ್ದು, ಅನವಶ್ಯಕವಾಗಿ ಓಡಾಡುತ್ತಿದ್ದವರಿಗೆ ದಂಡ ವಿಧಿಸಿದರು. ನಗರದ ಜಯದೇವ ಸರ್ಕಲ್‌ನಲ್ಲಿ ದಾಖಲೆ ನೀಡದ 15 ವಾಹನಗಳ ಜಪ್ತಿ ಮಾಡಿದರು.ಮೇಯರ್ ಎಸ್.ಟಿ.ವೀರೇಶ್ ಅವರೂ ಇದಕ್ಕೆ ಸಾಥ್ ನೀಡಿದರು.

ತಹಶೀಲ್ದಾರ್ ಬಿಎನ್. ಗಿರೀಶ್ ಮಾತನಾಡಿ, ರಾಜ್ಯ ಸರ್ಕಾರದ ಅದೇಶವನ್ನು ಪಾಲನೆ ಮಾಡಬೇಕು ಇಲ್ಲದಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬೆಳಿಗ್ಗೆ 10ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಿದ್ದು, ಬಳಿಕ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಬಾಗಿಲು ಮುಚ್ಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.