ADVERTISEMENT

ಧಾರವಾಡ: ಎರಡು ಹೊಸ ಕೋವಿಡ್-19 ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2020, 13:28 IST
Last Updated 1 ಜೂನ್ 2020, 13:28 IST
   

ಧಾರವಾಡ: ಧಾರವಾಡದ ಜಿಲ್ಲೆಯಲ್ಲಿ ಸೋಮವಾರ ಎರಡುಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಪಿ-3397 (47 ವರ್ಷ, ಪುರುಷ) ಇವರು ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದವರಾಗಿದ್ದು, ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರದಿಂದ ಬಳಲುತ್ತ ಎಸ್ ಡಿ ಎಂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಕೋವಿಡ್ ಪಾಸಿಟಿವ್ ದೃಢಪಟ್ಟ ನಂತರ ಕಿಮ್ಸ್ ಗೆ ದಾಖಲಿಸಲಾಗಿದೆ.

ಪಿ-3398 ( 25 , ಪುರುಷ ) ಇವರು ಹುಬ್ಬಳ್ಳಿ ಶಹರ ನಿವಾಸಿಯಾಗಿದ್ದಾರೆ, ಬೆಂಗಳೂರು ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ48ಕ್ಕೆ ಏರಿಕೆಯಾಗಿದೆ. ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದವರು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.