ಬಿಜೆಪಿ ಶಾಸಕ ಬಿ.ಪಿ. ಹರೀಶ್
ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿ ಅವಮಾನಿಸಿದ ಶಾಸಕ ಬಿ.ಪಿ. ಹರೀಶ್ ಹೇಳಿಕೆಯನ್ನು ಖಂಡಿಸಿದ ರಾಜ್ಯ ಮಹಿಳಾ ಆಯೋಗ, ಶಾಸಕರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರಿಗೆ ಪತ್ರ ಬರೆದಿದೆ.
ಮಹಿಳಾ ಅಧಿಕಾರಿಯನ್ನು ಸಾರ್ವಜನಿಕವಾಗಿ ಅವಮಾನಿಸಿದ್ದು ಖಂಡನೀಯ. ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿದೆ. ಶಾಸಕರ ಹೇಳಿಕೆಯ ಬಗ್ಗೆ ಮಹಿಳಾ ಪೊಲೀಸ್ ಅಧಿಕಾರಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ಪರಿಶೀಲಸಿ ನಿಯಮಾನುಸಾರ ಕ್ರಮ ಕೈಗೊಂಡು ಶೀಘ್ರ ವರದಿ ನೀಡಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.