ADVERTISEMENT

ಒಡೆಯರಹತ್ತೂರು: ‘ನಮ್ಮ ಊರು, ನಮ್ಮ ಕೆರೆ’ ಯೋಜನೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 14:45 IST
Last Updated 27 ಏಪ್ರಿಲ್ 2025, 14:45 IST
ನ್ಯಾಮತಿ ತಾಲ್ಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ಆಯ್ಯನಕೆರೆ ಹೂಳೆತ್ತುವ ಕಾಮಗಾರಿಗೆ ಭಾನುವಾರ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಚಾಲನೆ ನೀಡಿದರು
ನ್ಯಾಮತಿ ತಾಲ್ಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ಆಯ್ಯನಕೆರೆ ಹೂಳೆತ್ತುವ ಕಾಮಗಾರಿಗೆ ಭಾನುವಾರ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಚಾಲನೆ ನೀಡಿದರು   

ಒಡೆಯರ ಹತ್ತೂರು (ನ್ಯಾಮತಿ): ಕೆರೆ ಕಟ್ಟೆಗಳು ರೈತರ ಜೀವನಾಡಿ. ಇವುಗಳ ಉತ್ತಮ ನಿರ್ವಹಣೆಯಾದರೆ ರೈತರ ಬದುಕು ಹಸನಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಹೇಳಿದರು.

ಗ್ರಾಮದಲ್ಲಿ ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ, ಒಡೆಯರ ಹತ್ತೂರು ಗ್ರಾಮ ಪಂಚಾಯಿತಿ, ಕೆರೆ ಅಭಿವೃದ್ದಿ ಸಮಿತಿ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಅಯ್ಯನಕೆರೆ ಹೂಳೆತ್ತುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದರು.

ರಾಜ್ಯದ ಕೆರೆಗಳ ಪುನಶ್ಚೇತನಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು 2016 ರಲ್ಲಿ ರಾಜ್ಯದಲ್ಲಿ ‘ನಮ್ಮ ಊರು, ನಮ್ಮ ಕೆರೆ’ ಕಾರ್ಯಕ್ರಮ ಆರಂಭಿಸಿದ್ದಾರೆ. ಅಯ್ಯನಕೆರೆ 26 ಎಕರೆ ವಿಸ್ತೀರ್ಣ ಹೊಂದಿದ್ದು, ಮಳೆಗಾಲದಲ್ಲಿ ನೀರು ತುಂಬಿದರೆ ಅಕ್ಕಪಕ್ಕದ ಕೊಳವೆಬಾವಿಗಳಲ್ಲಿ ಅಂತರ್ಜಲ ಹೆಚ್ಚಲಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ. ಇಂತಹ ಕೆಲಸಕ್ಕೆ  ಗ್ರಾಮಸ್ಥರು ಸಹಕರಿಸಬೇಕು ಎಂದರು.

ADVERTISEMENT

ರಾಜ್ಯದಲ್ಲಿ ₹ 50 ಕೋಟಿ ವೆಚ್ಚದಲ್ಲಿ 850 ಕೆರೆಗಳನ್ನು ಪುನಶ್ಚೇತನ ಮಾಡಲಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ನಾಲ್ಕು ಕೆರೆಗಳು ಹಾಗೂ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳಲ್ಲಿ ಐದು ಕೆರೆಗಳ ಹೊಳೆತ್ತಲಾಗುತ್ತಿದೆ ಎಂದರು.

‘ಸರ್ಕಾರದ ಹಂತದಲ್ಲಿ ಕೂಡ ಇಂತಹ ಕೆರೆ ಹೊಳೆತ್ತುವ ಕಾರ್ಯಗಳು ನಡೆಯುತ್ತವೆ. ಆದರೆ ಅಲ್ಲಿ ಪ್ರಮಾಣಿಕತೆಯ ಕೊರತೆಯಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಕೆಲಸಗಳು ಅಗುವುದಿಲ್ಲ. ಧರ್ಮಸ್ಥಳ ಸಂಸ್ಥೆಯಿಂದ ಉತ್ತಮ ಕಾರ್ಯವಾಗುತ್ತಿದೆ. ಸಂಸ್ಥೆಯಿಂದ ಹಲವು ಸಾಮಾಜಿಕ ಕಾರ್ಯ ಕೈಗೊಳ್ಳುತ್ತಿರುವುದು ಶ್ಲಾಘನೀಯ’ ಎಂದು ರಾಜ್ಯ ಅಲ್ಪಸಂಖ್ಯಾತ ವರ್ಗಗಳ ಉಪಾಧ್ಯಕ್ಷ ಎಚ್.ಎ. ಉಮಾಪತಿ ಹೇಳಿದರು.

ಕೆರೆ ಅಭಿವೃದ್ದಿ ಸಮಿತಿ ಅಧ್ಯಕ್ಷ ಫಾಲಾಕ್ಷಪ್ಪ ಅಧ್ಯಕ್ಷತೆ ವಹಿಸಿದ್ದರು. ರೈತ ಸಂಘದ ಹೊನ್ನಾಳಿ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಸಿ.ಬಸಪ್ಪ, ಹೊಸಮನೆ ಮಲ್ಲಿಕಾರ್ಜುನ, ನಿವೃತ್ತ ಶಿಕ್ಷಕ ಚನ್ನಪ್ಪ, ಹಾಲೇಶ, ಧರ್ಮಸ್ಥಳ ಸಂಸ್ಥೆಯ ಪ್ರೇಮಕುಮಾರ, ಪ್ರಗತಿ ಬಂಧು ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು, ಗ್ರಾಮದ ಮುಖಂಡರು, ರೈತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.